Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ...

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ಬಿಡುಗಡೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 Oct 2025 2:30 PM IST
share
ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ಬಿಡುಗಡೆ : ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಶಾಲೆಯನ್ನು ಕೊಡುವುದು ಬೇಡ ಎಂದು ಹೇಳಿದ್ದೇನೆ. ಅಲ್ಲದೆ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ ನೀಡಿದ್ದೆ. ಅದರ ವಿಚಾರದಲ್ಲಿ ನಮ್ಮ ತಂಡವೊಂದು ಮಂಡ್ಯದಲ್ಲಿ ಕೆಲಸ ಮಾಡುತ್ತಿದೆ. ಯಾರು ಅದರ ಬಗ್ಗೆ ಲಘುವಾಗಿ ಮಾತನಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆಯಿಂದ ಈಗಾಗಲೇ 10 ಕೋಟಿ ರೂ. ಅನುದಾನಕ್ಕೆ ಅರ್ಜಿ ಕೊಟ್ಟಿದ್ದಾರೆ. ಸದ್ಯದಲ್ಲೆ ಆ ಹಣ ಬಿಡುಗಡೆಯಾಗಲಿದೆ. ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಕೆಲ ದಿನಗಳಿಂದ ಕಾರಣಾಂತರಗಳಿಂದ ಮಂಡ್ಯಕ್ಕೆ ಭೇಟಿ ಕೊಡಲು ಆಗಿರಲಿಲ್ಲ. ಆದರೂ ನಾನು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿನಿತ್ಯ ಜಿಲ್ಲೆಯ ಮಾಹಿತಿ ಪಡೆಯುತ್ತಿದ್ದೆ. ಜಯಚಾಮರಾಜೇಂದ್ರ ಮಾರುಕಟ್ಟೆ ಮಳಿಗೆ ಉದ್ಘಾಟನೆಗೆ ಬಂದಿದ್ದೇನೆ. ಕೆಲಸದ ಒತ್ತಡದಲ್ಲೂ ಜಿಲ್ಲೆಗೆ ಹೆಚ್ಚು ಸಮಯ ಮೀಸಲು ಇಡುತ್ತೇನೆ. ಜತೆಗೆ ರಾಜ್ಯದ ಪ್ರವಾಸ ಮಾಡುವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಅನೇಕ ಯೋಜನೆಗೆ ಚಾಲನೆ ಕೊಟ್ಟಿದ್ದೇನೆ. ಈ ವರ್ಷ ಶಾಲಾ ಕಟ್ಟಡ, ಬಸ್ ನಿಲ್ದಾಣಗಳನ್ನು ಸಿಎಸ್'ಆರ್ ನಿಧಿಯ ಮೂಲಕ ಅನುಷ್ಠಾನ ಮಾಡುತ್ತಿದ್ದೇನೆ. ಮೈಶುಗರ್ ಶಾಲೆ ಅಭಿವೃದ್ಧಿಗೂ ಅದೇ ನಿಧಿಯಿಂದ ಹಣ ನೀಡಲಾಗುತ್ತಿದೆ. ಅನುದಾನ ತರಿಸಿ ಕೊಡುವ ಜವಾಬ್ದಾರಿ ನನ್ನದು ಮೈಶುಗರ್ ಶಾಲೆಗೆ ಇತಿಹಾಸ ಇದೆ. ಯಾರೂ ಸಣ್ಣದಾಗಿ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಮಾರುಕಟ್ಟೆ ಮಳಿಗೆಗಳ ಉದ್ಘಾಟನೆ

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು, ಮಂಡ್ಯ ನಗರಸಭೆ ವತಿಯಿಂದ ನಗರದ ಜಯಚಾಮರಾಜೇಂದ್ರ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಾರಾಟ ಮಳಿಗೆಗಳ ಸಮುಚ್ಚಯವನ್ನು ಉದ್ಘಾಟಿಸಿದರು.

ಮಂಡ್ಯದ ಅತ್ಯಂತ ಹಳೆಯ ಮಾರುಕಟ್ಟೆ, ಗೊಂದಲಕ್ಕೆ ಅವಕಾಶ ಆಗದಂತೆ 127 ಮಳಿಗೆಗಳ ಹಂಚಿಕೆ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X