Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ʼಹಪ್ಪಳದ...

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ʼಹಪ್ಪಳದ ಜೊತೆ ಕಬಾಬ್ ಇರಲಿʼ : ಪ್ರಗತಿಪರ ಸಂಘಟನೆಗಳ ಆಗ್ರಹ

ಡಿಸಿ ಕಚೇರಿ ಎದುರು ಮೊಟ್ಟೆ ತಿಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Dec 2024 9:07 PM IST
share
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ʼಹಪ್ಪಳದ ಜೊತೆ ಕಬಾಬ್ ಇರಲಿʼ : ಪ್ರಗತಿಪರ ಸಂಘಟನೆಗಳ ಆಗ್ರಹ

ಮಂಡ್ಯ : ನಗರದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವನ್ನೂ ನೀಡಬೇಕೆಂಬ ಹೋರಾಟ ತೀವ್ರಗೊಳ್ಳುತ್ತಿದ್ದು, ಸೋಮವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಮೊಟ್ಟೆ ತಿನ್ನುವ ಮೂಲಕ ಮಾಂಸಾಹಾರಕ್ಕೆ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಹೋರಾಟಗಾರರು, ಬೇಳೆಯ ಜೊತೆ ಮೂಳೆಯು ಇರಲಿ, ಹಪ್ಪಳದ ಜೊತೆ ಕಬಾಬ್ ಇರಲಿ, ಕೋಸಂಬರಿ ಜೊತೆ ಎಗ್‍ಬುರ್ಜಿ ಇರಲಿ, ಮುದ್ದೆ ಜೊತೆ ಜೊತೆ ಬೋಟಿ ಗೊಜ್ಜೂ ಇರಲಿ ಎಂದು ಘೋಷಣೆ ಕೂಗಿ ಸಮ್ಮೇಳನದ ಊಟದ ಪಟ್ಟಿಯಲ್ಲಿ ಮಾಂಸಹಾರ ಸೇರಿಸಲು ಒತ್ತಾಯಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುವುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಆದರೆ, ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರಕ್ಕೆ ನಿಷೇಧ ವಿಧಿಸಿ ಸಮ್ಮೇಳನಕ್ಕೆ ಆಗಮಿಸುವ ಲಕ್ಷಾಂತರ ಜನತೆಗೆ ಸಸ್ಯಾಹಾರ ನೀಡಲು ಮುಂದಾಗಿರುವುದು ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಂಸಾಹಾರ ನಿರ್ಬಂಧಿಸುವುದುಸುವುದು ಸಾಧುವಲ್ಲ. ಅದರಲ್ಲೂ ಮಂಡ್ಯ ಜಿಲ್ಲೆಯ ಹಬ್ಬಗಳು, ಕಾರ್ಯಕ್ರಮಗಳು, ಸಮ್ಮೇಳನಗಳು ಮಾಂಸಾಹಾರಿ ಊಟೋಪಚಾರಕ್ಕೆ ಹೆಸರುವಾಸಿಯಾಗಿವೆ. ಅಲ್ಲದೇ ಸಮ್ಮೇಳನದಲ್ಲಿ ಭಾಗವಹಿಸುವ ಬಹುಸಂಖ್ಯಾತರು ಮಾಂಸಾಹಾರಿಗಳೇ ಆಗಿರುವಾಗ ನಿಷೇಧ ಏತಕ್ಕಾಗಿ? ಎಂದು ಅವರು ಪ್ರಶ್ನಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಬೇಡಿಕೆ ಏಕೆ? ಎಂದು ಪ್ರಶ್ನಿಸುವುದೇ ಅಸಮಂಜಸವಾಗಿದೆ. ಆಹಾರ ಎಂಬುದು ಆಹಾರವಷ್ಟೇ. ಅದನ್ನು ಸಸ್ಯಾಹಾರ ಮತ್ತು ಮಾಂಸಾಹಾರ ಎಂದು ಬೇರ್ಪಡಿಸಿ ಮಾಂಸಾಹಾರ ಅಧಮ, ಅಪವಿತ್ರ ಎಂಬೆಲ್ಲಾ ಭಾವವನ್ನು ಜನರಲ್ಲಿ ಬಿತ್ತುವ ಕೆಲಸ ದೇಶದಲ್ಲಿ ನಡೆಯುತ್ತಾ ಇದೆ ಎಂದು ಅವರು ಕಿಡಿಕಾರಿದರು.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ 12-13ನೇ ಶತಮಾನದ ಚಾಲುಕ್ಯ ಅರಸ ಮೂರನೇ ಸೋಮೇಶ್ವರನು ಬರೆದ ಮಾನಸೋಲ್ಲಾಸ ಕೃತಿಯಲ್ಲಿ ‘ಮಾಂಸಾಹಾರಗಳ ಬಹುದೊಡ್ಡ ಪಟ್ಟಿಯೇ ಇದೆ. ಹೀಗಿರುವಾಗ ಮಾಂಸಾಹಾರ ನಿಷೇಧ ಎಂಬುದು ಅಪಾಯಕಾರಿ ಅಜೆಂಡವಾಗಿದೆ. ನಾಗರಿಕರ ಮೂಲಭೂತ ಅಗತ್ಯವಾದ ಆಹಾರದ ವಿಚಾರದಲ್ಲಿ ಸಮ್ಮೇಳನದ ಆಯೋಜಕರು ತಾರತಮ್ಯ ಮತ್ತು ಕೀಳು ಮನೋಭಾವ ಹೊಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವು ಎಂದು ಅವರು ಪ್ರತಿಪಾದಿಸಿದರು.

ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರದ ಮಾರಾಟಕ್ಕೆ ವಿಧಿಸಿರುವ ನಿರ್ಬಂಧ ತೆಗೆದುಹಾಕಿ ಮುಕ್ತ ಅವಕಾಶ ಒದಗಿಸಬೇಕು. ಸಮ್ಮೇಳನದ ಊಟದಲ್ಲಿ ಸಸ್ಯಾಹಾರ ಊಟದ ಜೊತೆಗೆ ಕೋಳಿ ಮಾಂಸ, ಮೊಟ್ಟೆಯನ್ನು ಕಡ್ಡಾಯವಾಗಿ ನೀಡಬೇಕು. ಇಲ್ಲದಿದ್ದರೆ, ಸಾರ್ವಜನಿಕರಿಂದ ಕೋಳಿ, ಮೊಟ್ಟೆ ಮತ್ತು ಪಡಿತರ ಸಂಗ್ರಹಿಸಿ ಮಾಂಸಾಹಾರ ವಿತರಿಸುತ್ತೇವೆ ಎಂದು ಅವರು ಎಚ್ಚರಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿಗೌಡ, ಸಿಐಟಿಯುನ ಸಿ.ಕುಮಾರಿ, ಕರುನಾಡು ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಚಂದ್ರು ಮಂಡ್ಯ, ಕರವೇ(ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಎಂ.ವಿ. ಕೃಷ್ಣ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಅಖಿಲ ಭಾರತ ವಕೀಲರ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ.ವಿಶ್ವನಾಥ್, ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ ರಾಜ್ಯಾಧ್ಯಕ್ಷ ಗಂಗರಾಜು. ನಿರಂಜನ್, ಬುದ್ಧ ಭಾರತ ಫೌಂಡೇಷನ್ ಅಧ್ಯಕ್ಷ ಜೆ.ರಾಮಯ್ಯ, ವಿವಿಧ ಸಂಘಟನೆಗಳ ಮುಖಂಡರಾದ ಟಿ.ಡಿ.ನಾಗರಾಜ್, ನರಸಿಂಹಮೂರ್ತಿ, ಸಂತೋಷ್ ಜಿ., ಎಂ.ಸಿ.ಲಂಕೇಶ್ ಮಂಗಲ, ವಕೀಲ ಲಕ್ಷ್ಮಣ್ ಚೀರನಹಳ್ಳಿ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X