Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ...

ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ : ಡಾ.ಗೊ.ರು.ಚನ್ನಬಸಪ್ಪ

► ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಆಗಮನ : ಚಲುವರಾಯಸ್ವಾಮಿ ► 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ22 Dec 2024 9:15 PM IST
share
ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ : ಡಾ.ಗೊ.ರು.ಚನ್ನಬಸಪ್ಪ

ಮಂಡ್ಯ : ಡಿ.20, 21, 22ರಂದು ಮೂರು ದಿನಗಳ ಕಾಲ ಮಂಡ್ಯದಲ್ಲಿ‌ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ಯಶಸ್ಸಿನೊಂದಿಗೆ ಸಮಾರೋಪಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷರು, ನಾಡೋಜ ಗೊ.ರು.ಚನ್ನಬಸಪ್ಪ, ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ ಬೀರುತ್ತದೆ. ಇಲ್ಲಿ ಬಹಳ ಸುಗಮವಾಗಿ ಸಮ್ಮೇಳನ ಜರುಗಿದೆ. ಸಾಮಾನ್ಯವಾಗಿ ಊಟ, ವಸತಿ ಬಗ್ಗೆ ದೂರು ಬರುತ್ತವೆ. ಆದರೆ ಇಲ್ಲಿ ಅದ್ಯಾವುದು ಕೇಳಲಿಲ್ಲ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ ಎಂದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ನೆಲ, ಜಲ, ಭಾಷೆ ಉಳಿವಿಗೆ ಸರಕಾರ ಸದಾ ಬದ್ಧ ಎಂದರು.

ಕಳೆದ ಮೂರು ದಿನಗಳಲ್ಲಿ 6 ಲಕ್ಷಕ್ಕೂ ಅಧಿಕ ಜನರು ಸಮ್ಮೇಳನಕ್ಕೆ ಆಗಮಿಸಿದ್ದಾರೆ. ಇದಲ್ಲದೇ 18 ದೇಶಗಳಿಂದ 200ಕ್ಕೂ ಅಧಿಕ ಕನ್ನಡ ಪ್ರೇಮಿಗಳು ಆಗಮಿಸಿದ್ದು ವಿಶೇಷ. ಸಮ್ಮೇಳನಾಧ್ಯಕ್ಷರ ಆಯ್ಕೆ, ಗೋಷ್ಠಿ, ಕಾರ್ಯಕ್ರಮಗಳು ಜನರ ಮೆಚ್ಚುಗೆ ಗಳಿಸಿವೆ ಎಂದು ಹೇಳಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿ, ವೈಜ್ಞಾನಿಕ ಪ್ರಗತಿ ನಡುವೆ ಭಾಷೆ ಉಳಿಸುವ ಸವಾಲಿದೆ. ಭಾಷೆಯ ಮೇಲಿನ ಅನ್ಯ ಭಾಷೆಗಳ ಏರಿಕೆ, ಪರಿಣಾಮಗಳ ಬಗ್ಗೆ ಆತಂಕವಿದೆ. ಆದರೆ ನಮ್ಮ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಸಮ್ಮೇಳನ ಸಹಕಾರಿಯಾಗಲಿದೆ. ಗ್ರಾಮೀಣ ಮಕ್ಕಳು ನಗರ ಪ್ರದೇಶದ ಮಕ್ಕಳೊಂದಿಗಿನ ಪೈಪೋಟಿ ತಪ್ಪಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಯಿತು. ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಲಾಯಿತು ಎಂದರು.

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕೇವಲ ಸಮ್ಮೇಳನ ಮಾಡಿದರೆ ಸಾಲದು. ಸಮ್ಮೇಳನದ ನಿರ್ಣಯಗಳನ್ನು ಅನುಷ್ಠಾನಕ್ಕೆ ಬರುವ ರೀತಿಯಲ್ಲಿ ನೋಡಿಕೊಳ್ಳುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿದೆ. ಇಲ್ಲಿನ ನಿರ್ಣಯಗಳ ಬಗ್ಗೆ ಸರಕಾರದ ಗಮನಕ್ಕೆ ತರಬೇಕು. ಅನುಷ್ಠಾನಕ್ಕೆ ಬಂದ ನಿರ್ಣಯಗಳು ಎಷ್ಟು ಎಂಬುದನ್ನು ಬಳ್ಳಾರಿ ಸಾಹಿತ್ಯ ಸಮ್ಮೇಳನದಲ್ಲಿ ಘೋಷಿಸಬೇಕು ಎಂದರು.

ಹಿರಿಯ ಸಾಹಿತಿ ಡಾ. ಸಿ.ಪಿ.ಕೃಷ್ಣಕುಮಾರ್ ಅವರು ಸಮಾರೋಪದ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ವಿನಯ್ ಗುರೂಜಿ ಶುಭನುಡಿಗಳನ್ನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X