ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಬಹಿರಂಗ ಕ್ಷಮೆ ಯಾಚಿಸಿದ ಕುಮಾರಸ್ವಾಮಿ

ಮಂಡ್ಯ: ಜಾತಿಯ ಹೆಸರಿನಲ್ಲಿ ಧಾರ್ಮಿಕ ಕ್ಷೇತ್ರ ದುರುಪಯೋಗ ಪಡಿಸಿಕೊಳ್ಳುವುದು ಯಾವ ರಾಜಕಾರಣಿಗೂ ಶೋಭೆ ತರುವುದಿಲ್ಲ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯರು ಈ ವಿಚಾರವಾಗಿ ಇದೀಗ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗೆ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.
ಮಂಡ್ಯದ ವಿ.ಸಿ. ಫಾರಂನಲ್ಲಿ ನಡೆದ ಕೃಷಿ ಮೇಳದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, , "ನಮ್ಮ ನಿಷ್ಠೆ ಹೃದಯದಲ್ಲಿದೆ, ಅದನ್ನು ಹೊರಗೆ ತೋರಿಸಿಕೊಳ್ಳಬೇಕಾಗಿಲ್ಲ. ಪರಮಪೂಜ್ಯರಿಗೆ ನನ್ನಿಂದ ಏನಾದರೂ ಅಪಚಾರ ಆಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ" ಎಂದು ಹೇಳಿದರು.
ವಾರದ ಹಿಂದೆ ಮಾಧ್ಯಮದೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗಲೂ, ಅಧಿಕಾರ ಕಳೆದುಕೊಂಡಾಗಲೂ ಯಾವುದೇ ಮಠಾಧೀಶರ ನೆರವು ಕೇಳಿರಲಿಲ್ಲ. ಮಠಾಧೀಶರ ಕೆಲಸವೇ ಬೇರೆ. ರಾಜ್ಯದಲ್ಲಿ ನಡೆಯುತ್ತಿರುವ ಜಾತೀಯ ರಾಜಕಾರಣದಿಂದ ರಾಜ್ಯಕ್ಕೆ ನಷ್ಟವಾಗುತ್ತದೆ ಹೊರತು ಯಾರಿಗೂ ಲಾಭವಿಲ್ಲ. ಇದು ಸಮಾಜಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದರು.





