ಮಂಡ್ಯ | 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ | freepik.com
ಮಂಡ್ಯ : ಮೂವರು ದುಷ್ಕರ್ಮಿಗಳು 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಎರಡು ದಿನಗಳ ನಂತರ ಬೆಳಕಿಗೆ ಬಂದಿರುವುದು ವರದಿಯಾಗಿದೆ.
ಜ.31ರಂದು ಮೂವರು ದುಷ್ಕರ್ಮಿಗಳು ಬಾಲಕಿಗೆ ಕೇಕ್ ಕೊಡಿಸಿ ನಂತರ, ಚಾಕು ತೋರಿಸಿ ಬೆದರಿಸಿ ಶಾಲಾ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆೆ.
ಹೊಟ್ಟೆ ನೋವು ಮತ್ತು ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿಯನ್ನು ಆಕೆಯ ಚಿಕ್ಕಮ್ಮ ವಿಚಾರಿಸಿದಾಗ ನಡೆದ ಘಟನೆಯನ್ನು ಬಾಲಕಿ ವಿವರಿಸಿದಳು ಎನ್ನಲಾಗಿದ್ದು, ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





