Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಹೋರಾಟ;...

ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಹೋರಾಟ; ತಮಿಳುನಾಡು ಸಿಎಂ ಚಿತ್ರದ ಪೋಸ್ಟರ್ ಹರಿದು ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 July 2026 6:54 PM IST
share
ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಹೋರಾಟ; ತಮಿಳುನಾಡು ಸಿಎಂ ಚಿತ್ರದ ಪೋಸ್ಟರ್ ಹರಿದು ಆಕ್ರೋಶ
ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರಸ್ತೆಯಲ್ಲಿ ಧರಣಿ

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮೂರನೇ ದಿನವಾದ ಗುರುವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ ಕರುನಾಡ ವಿಜಯ ಸೇನೆ ಸಂಘಟನೆಯ ಕಾರ್ಯಕರ್ತರು, ಗುರುಶ್ರೀ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಾಯಕ ನಟನಾಗಿರುವ ‘ಜನನಾಯಗನ್' ಚಿತ್ರದ ಪ್ರದರ್ಶನವನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಚಿತ್ರಮಂದಿರದ ಮುಂಭಾಗದ ಪ್ರದರ್ಶಿಸಿದ್ದ ಸಿನಿಮಾದ ಪೋಸ್ಟರ್ ಅನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ಮನವಿಗೆ ಸ್ಪಂದಿಸಿದ ಚಿತ್ರಮಂದಿರ ಆಡಳಿತ ಮಂಡಳಿ ಜೋಸೆಫ್ ವಿಜಯ್ ಅವರ ಚಿತ್ರಪ್ರದರ್ಶವನ್ನು ರದ್ದುಗೊಳಿಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನಮ್ಮಲ್ಲಿ ಕುಡಿಯಲೂ ನೀರಿಲ್ಲದ ಕಾರಣ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವ ತೀರ್ಮಾನವನ್ನು ತೆಗೆದುಕೊಳ್ಳಬಾರದು. ಕಾವೇರಿ ನೀರು ನಿಯಂತ್ರಣಾ ಸಮಿತಿಯ ಶಿಫಾರಸ್ಸನ್ನು ಪಾಲಿಸಲು ಸಾಧ್ಯವಿಲ್ಲವೆಂದು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಮರ್ಥವಾಗಿ ಮಂಡಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಧರಣಿ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ರಸ್ತೆಯಿಂದ ಹೊತ್ತೊಯ್ದು ಬೇರೆ ಸ್ಥಳಕ್ಕೆ ಬಿಟ್ಟು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಮಾತನಾಡಿದರು.

ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದರು. ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೂಡಲೇ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿದದರು.

Tags

mandya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X