ಮಂಡ್ಯ | ಮರಕ್ಕೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಗುರುವಾರ ನಡೆದಿದೆ.
ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ವಾಮ್ಯಕ್ಕೆ ಒಳಪಟ್ಟ ಬಸ್ ಕುಂದನಹಳ್ಳಿ ಗೇಟ್ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಕೆಲ ಶಾಲಾ ಮಕ್ಕಳ ಸೇರಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳು ಪ್ರಯಾಣಿಕರನ್ನು ಕೆ.ಆರ್. ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story