Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ| ತಳಸಮುದಾಯಗಳ ಜನಪ್ರನಿಧಿಗಳು...

ಮಂಡ್ಯ| ತಳಸಮುದಾಯಗಳ ಜನಪ್ರನಿಧಿಗಳು ಮಾರಾಟವಾಗುತ್ತಿದ್ದಾರೆ: ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದ

ವಾರ್ತಾಭಾರತಿವಾರ್ತಾಭಾರತಿ28 Dec 2023 9:05 PM IST
share
ಮಂಡ್ಯ| ತಳಸಮುದಾಯಗಳ ಜನಪ್ರನಿಧಿಗಳು ಮಾರಾಟವಾಗುತ್ತಿದ್ದಾರೆ:  ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದ

ಮಂಡ್ಯ: ಪ್ರಸ್ತುತ ರಾಜಕಾರಣದಲ್ಲಿ ಶೋಷಿತ ತಳಸಮುದಾಯಗಳ ಜನಪ್ರತಿನಿಧಿಗಳು ಮಾರಾಟವಾಗುತ್ತಿದ್ದಾರೆ. ಆ ಮೂಲಕ ತಮ್ಮ ಸಮುದಾಯವನ್ನು ವಂಚಿಸುತ್ತಾ ಕುಲಕಂಟಕರಾಗುತ್ತಿದ್ದಾರೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಸಂಸ್ಕೃತಿ ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾಧಿಸಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಶನ್ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ `ಕೊರವಂಜಿ ಸಂಸ್ಕೃತಿ ಉತ್ಸವ' ಕಾರ್ಯಕ್ರಮದಲ್ಲಿ ಅವರು ನೆಲಮೂಲ ಸಂಸ್ಕೃತಿ ಕುರಿತು ಪ್ರಧಾನ ಭಾಷಣ ಮಾಡಿದರು.

ನಾವಿಂದು ಸಾಂಸ್ಕೃತಿಕ ಗುಲಾಮಗಿರಿಗೆ ಸಿಲುಕಿದ್ದೇವೆ. 3,500 ವರ್ಷಗಳ ಹಿಂದೆ ಕಶ್ಯಪ ಮಹರ್ಷಿಗಳು ಸಪ್ತ ಮಾತೃಕೆಯರನ್ನು ಗುಲಾಮರಾಗಿಸಿಕೊಂಡಂತೆ ಇಂದು ಮೇಲ್ಜಾತಿಯವರು ಕೆಳಜಾತಿಗಳವರನ್ನು ಗುಲಾಮರಾಗಿಸಿಕೊಂಡು ಅವಕಾಶ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸಾಂಸ್ಕೃತಿಕ ದಾಸ್ಯದಿಂದ ಮುಕ್ತವಾಗದಿದ್ದಲ್ಲಿ ತಳಸಮುದಾಯಗಳು ಅಭಿವೃದ್ಧಿ ಕಾಣಲು ಸಾಧ್ಯವೇ ಇಲ್ಲ ಎಂದು ಅವರು ಎಚ್ಚರಿಸಿದರು.

ಕೊರವಂಜಿ ಕತೆ ಕಲ್ಪಿತವಲ್ಲ ಇದು ಎಲ್ಲ ಸಮುದಾಯಗಳ ಸಂಕಥನ, ಕುಲಚರಿತ್ರೆಗಳು ನಮ್ಮ ಸಂಸ್ಕೃತಿಯನ್ನು ತೋರಿಸುತ್ತವೆಯಾದ್ದರಿಂದ ಕುಲಶಾಸ್ತ್ರೀಯ ಅಧ್ಯಯನವಾಬೇಕು. ಆಗ ಎಲ್ಲ ಕ್ಷೇತ್ರಗಳಲ್ಲೂ ಅವಕಾಶಗಳು ತನ್ನಿಂದ ತಾನೇ ತೆರೆದುಕೊಳ್ಳುವಂತಾಗುತ್ತದೆ ಎಂದು ಅವರು ಹೇಳಿದರು.

ಡ್ರೀಮ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಕಿರಣ್ಕುಮಾರ್ ಕೊತ್ತಗೆರೆ ಮಾತನಾಡಿ, ಜನಮೂಲ ಸಂಸ್ಕೃತಿಯನ್ನು ಅನಾವರಣಗೊಳಿಸಲು ಕೊರವಂಜಿಯ ಅಧ್ಯಯನಪೀಠ ಸ್ಥಾಪನೆ ಆಗಬೇಕು ಮತ್ತು ಮಂಡ್ಯದಲ್ಲಿ ನುಲಿಯ ಚಂದಯ್ಯ ಕೊರವಂಜಿ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು.

ಇವತ್ತಿಗೂ ಇಡೀ ರಾಜ್ಯದಲ್ಲಿ ನಮ್ಮ ಸಮುದಾಯದ ಒಬ್ಬೇ ಒಬ್ಬ ಜಿಪಂ ಸದಸ್ಯನಿಲ್ಲ ಎಂದರೆ ನಮ್ಮ ಸ್ಥಿತಿ ಹೇಗಿರಬೇಕೆಂದು ಊಹಿಸಿಕೊಳ್ಳಿ. ನಮ್ಮ ಜನ ನಮ್ಮ ಮೂಲ ಸಂಸ್ಕೃತಿಯನ್ನು ಮರೆತಿದ್ದರಿಂದಾಗಿ ನಮಗೆ ಯಾವುದೇ ಅವಕಾಶಗಳು ಸಿಗಲಿಲ್ಲ. ಈಗ ಮರಳಿ ಮನೆಗೆ-ಮೂಲ ನೆಲೆಗೆ ಎಂಬ ಆಶಯದೊಂದಿಗೆ ಕೊರವಂಜಿ ಸಂಸ್ಕೃತಿಯ ಅಡಿಯಲ್ಲಿ ಸಂಘಟಿತರಾಗುತ್ತಿದ್ದೇವೆ ಎಂದು ಅವರು ಹೇಳಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ಲಕ್ಷ್ಮೀಪತಿ ಕೋಲಾರ, ಗಾರ ಶ್ರೀನಿವಾಸ್, ಸಿ.ಎನ್.ಮಂಜೇಶ್, ಸುನಿಲ್ ಮಾನ್ಪಡೆ, ಕುಡಿಯರ ಮುತ್ತಪ್ಪ, ಜುಲಿಯಾನ ಪೆದ್ರು ಫರ್ನಾಂಡಿಸ್ ಸಿದ್ದಿ ಅವರಿಗೆ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಚಂದ್ರವನ ಆಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಪಿ.ರವಿಕುಮಾರ್ಗೌಡ, ಕೆಪಿಸಿಸಿ ಕಾರ್ಯದರ್ಶಿ ಬಿ.ಶಿವಣ್ಣ, ತಹಸಿಲ್ದಾರ್ ಶಿವಕುಮಾರ್ ಬಿರಾದಾರ್, ಮಂಡ್ಯ ಜಿಲ್ಲಾ ಕುಳುವ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಕುಮಾರ್ ಗಣಂಗೂರು, ಇತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X