Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ವಿದ್ಯಾರ್ಥಿಗಳ ಮೇಲಿನ...

Mandya | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 July 2026 7:26 PM IST
share
Mandya | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ : ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಂಜಯ ವೃತ್ತದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರಕಾರ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿದರು. ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಇದರ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆಯೊಡ್ಡಿದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ಉಂಟಾಯಿತು. ಆದರೂ ಪ್ರತಿಭಟನಾಕಾರರು ಪ್ರತಿಕೃತಿಯನ್ನು ದಹಿಸಿದರು.

ನೀಟ್ ಪರೀಕ್ಷಾ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಕೇಂದ್ರ ಸರಕಾರದ ಬೇಜವಾಬ್ದಾರಿ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸುವ ಮೂಲಕ ಕ್ರೌರ್ಯತೆಯನ್ನು ಮೆರೆಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯವೇ ಆಗಿರುವ ನೀಟ್ ಪರೀಕ್ಷಾ ಹಗರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವ ಪ್ರಯತ್ನ ಮಾಡಲಿಲ್ಲ. ಕೇಂದ್ರ ಸಚಿವರ ರಾಜೀನಾಮೆಯನ್ನೂ ಪಡೆಯಲಿಲ್ಲ. ಇದು ಕೇಂದ್ರ ಸರಕಾರದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತದೆ ಎಂದು ಅವರು ಕಿಡಿಕಾರಿದರು.

ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ವೇಷದ ಹಲವು ಖಾಸಗಿ ವ್ಯಕ್ತಿಗಳು ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು. ನೀಟ್ ಪರೀಕ್ಷೆ ರದ್ದುಪಡಿಸಬೇಕು. ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಎಂ.ವಿ.ಕೃಷ್ಣ, ಟಿ.ಎಲ್.ಕೃಷ್ಣೇಗೌಡ, ಎಂ.ಬಿ.ನಾಗಣ್ಣಗೌಡ, ಎಚ್.ಡಿ.ಜಯರಾಂ, ಎಲ್.ಸಂದೇಶ್, ಎನ್.ದೊಡ್ಡಯ್ಯ, ಸಿ.ಕುಮಾರಿ, ನಿರಂಜನ್, ಎಸ್.ಪಿ.ನಾರಾಯಣಸ್ವಾಮಿ ಸೇರಿದಂತೆ ಇತರ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

protestMandya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X