Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ : ಗಣೇಶ ಮೂರ್ತಿ ವಿಸರ್ಜನೆ ವೇಳೆ...

ಮಂಡ್ಯ : ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ; ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

ವಾರ್ತಾಭಾರತಿವಾರ್ತಾಭಾರತಿ8 Sept 2025 11:59 AM IST
share
ಮಂಡ್ಯ :  ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ; ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್
ನಿಷೇಧಾಜ್ಞೆ ಜಾರಿ

ಮಂಡ್ಯ: ಗಣೇಶಮೂರ್ತಿ ವಿಜರ್ಸನೆ ವೇಳೆ ರವಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ಸೋಮವಾರ ಹಿಂದುತ್ವ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ಮಧ್ಯಾಹ್ನ 12 ವರೆಗೆ ಮದ್ದೂರು ಪಟ್ಟಣದಾದ್ಯಂತ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮದ್ದೂರು ತಹಶೀಲ್ದಾ‌ರ್ ಪರಶುರಾಮ್ ಸತ್ತಿಗೇರಿ ಅದೇಶಿಸಿದ್ದರೂ, ಇದರ ನಡುವೆ ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ನೂರಾರು ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾನಿರತ ವ್ಯಕ್ತಿಯೊಬ್ಬ, ಹೂವಿನ ಸರ್ಕಲ್ ಬಳಿ ಕಂಬದಲ್ಲಿ ಹಾರಾಡುತ್ತಿದ್ದ ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾರಿಸಿದ್ದಾನೆ.

ಉದ್ರಿಕ್ತ ಪ್ರತಿಭಟನಾಕಾರರನ್ನು ಪೊಲೀಸರು ಲಾಟಿಚಾರ್ಜ್ ಮಾಡಿ ಚದುರಿಸಿದರು. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಏನಿದು ಘಟನೆ :

ರವಿವಾರ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ನಡೆದಿದ್ದು, ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ನಾಲ್ವರು ಪೊಲೀಸರು ಸೇರಿದಂತೆ ಒಟ್ಟು 8 ಮಂದಿಗೆ ಗಾಯಗಳಾಗಿದ್ದು, ಅವರನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದ 5ನೇ ಕ್ರಾಸ್‌ನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಸಾಗುತ್ತಿತ್ತು.

ರಾಮ್‌ ರಹೀಂ ನಗರದ ಮಸೀದಿ ಬಳಿ ಹೋದಾಗ ರಾತ್ರಿ 8ರ ಸುಮಾರಿಗೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರತಿಯಾಗಿ ಮಸೀದಿ ಮೇಲೂ ಕಲ್ಲು ತೂರಾಟವಾಯಿತು ಎನ್ನಲಾಗಿದೆ. ಆಗ ಘರ್ಷಣೆ ತೀವ್ರ ಸ್ವರೂಪ ಪಡೆಯಿತು.

ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X