Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಬಸವಣ್ಣನವರ ಅವಹೇಳನ ಮಾಡಿದರೆ ನಾಲಗೆ...

ಬಸವಣ್ಣನವರ ಅವಹೇಳನ ಮಾಡಿದರೆ ನಾಲಗೆ ಸೀಳುತ್ತೇವೆ : ಎಂ.ಬೆಟ್ಟಹಳ್ಳಿ ಮಂಜುನಾಥ್ ಎಚ್ಚರಿಕೆ

ಯತ್ನಾಳ್ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Dec 2024 7:08 PM IST
share
ಬಸವಣ್ಣನವರ ಅವಹೇಳನ ಮಾಡಿದರೆ ನಾಲಗೆ ಸೀಳುತ್ತೇವೆ : ಎಂ.ಬೆಟ್ಟಹಳ್ಳಿ ಮಂಜುನಾಥ್ ಎಚ್ಚರಿಕೆ

ಮಂಡ್ಯ : ‘ವಿಶ್ವಗುರು ಬಸವಣ್ಣನವರ ಹೆಸರಲ್ಲೇ ಗೆದ್ದು ಬಂದು ಅಧಿಕಾರ ಹಿಡಿಯುವ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕೆ ಮನಸ್ಸೋಇಚ್ಚೆ ಮಾತನಾಡಿದರೆ ಅವರ ನಾಲಗೆಯನ್ನು ಸೀಳಬೇಕಾಗುತ್ತದೆ’ ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಸಂವಿಧಾನ ಶಿಲ್ಪಿ ಬಸವಣ್ಣನವರನ್ನು ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರ ಹೆಸರನ್ನು ಇಟ್ಟುಕೊಂಡಿರುವ ಯತ್ನಾಳ್, ಅಣ್ಣನವರ ಆದರ್ಶಗಳನ್ನು ಅರಿಯುವಲ್ಲಿ ವಿಫಲರಾಗಿದ್ದಾರೆ. ಬಸವಣ್ಣನವರ ಅನುಯಾಯಿಯಾಗಿದ್ದರೆ ಅವರು ಹಣೆಯಲ್ಲಿ ವಿಭೂತಿ ಧರಿಸಿ ಕೊರಳಲ್ಲಿ ಇಷ್ಟಲಿಂಗ ಧರಿಸಬೇಕಿತ್ತು. ಆದರೆ ಅವರು, ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ನಾಯಕರು ಬಸವಣ್ಣನವರ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಆದರೆ, ಅವರನ್ನು ಅವಹೇಳನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸುವ ಶಕ್ತಿಯನ್ನು ಕರ್ನಾಟಕ ಹಾಗೂ ಕೇಂದ್ರದ ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜ್ಯ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದನ್ನು ಸಹಿಸಲಾಗದ ಬಿಜೆಪಿ ನಾಯಕರು ಹಿಂದುತ್ವದ ಸೋಗಿನಲ್ಲಿ ಬಸವಣ್ಣನವರ ಆಶಯಗಳನ್ನು ಹತ್ತಿಕ್ಕಲು ಸಮುದಾಯವನ್ನು ದಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಇಂತಹ ಘಟನೆಗಳು ಮರುಕಳಿಸಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಪೀಠಾಧ್ಯಕ್ಷ ಓಂಕಾರ ಸ್ವಾಮೀಜಿ ಮಾತನಾಡಿ, ಯತ್ನಾಳ್ ಲಿಂಗಾಯತ ಸಮುದಾಯದವರಾಗಿ ಸಮುದಾಯವನ್ನು ಶಕ್ತಿಯಾಗಿ ಬಳಸಿಕೊಂಡು ಶಾಸಕ ಸ್ಥಾನವನ್ನು ಅಲಂಕರಿಸಕೊಂಡಿದ್ದು, ಬಸವಣ್ಣನವರ ವಿರುದ್ಧ ಹೊಳೆಗೆ ಹಾರಿಕೊಂಡರು ಎಂದು ಹೇಳಿಕೆ ನೀಡಿರುವುದು ಅಸಹನೀಯ. ಈ ರೀತಿಯ ಮಾತುಗಳನ್ನು ಆಡಿದವರನ್ನು ಸಮುದಾಯ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಮಹಾಸಭಾದ ಮದ್ದೂರು ತಾಲೂಕು ಅಧ್ಯಕ್ಷ ಮೆಣಸಗೆರೆ ಶಿವಲಿಂಗಪ್ಪ, ಮುಖಂಡರಾದ ಯೋಗ ಶಿಕ್ಷಕ ಶಿವರುದ್ರಸ್ವಾಮಿ, ಬೆಳ್ಳಪ್ಪ, ವೀರಭದ್ರಯ್ಯ ಹಲಸಹಳ್ಳಿ, ಆನಂದ್ ಕೊನ್ನಾಪುರ ಹಾಗೂ ಮಳವಳ್ಳಿ ಮಂಜುನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X