Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ...

ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರಕಾರ ಕೆಲಸ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಮಳವಳ್ಳಿ ತಾಲೂಕಿನ ಕಲ್ಕುಣಿಯಲ್ಲಿ ಬೌದ್ಧ ಅಂಬೇಡ್ಕರ್ ಮಹಾದ್ವಾರ ಉದ್ಘಾಟಿಸಿದ ಕೇಂದ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ12 Jan 2025 11:58 AM IST
share
ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರಕಾರ ಕೆಲಸ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ/ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 'ಬೌದ್ಧ ಅಂಬೇಡ್ಕರ್ ಮಹಾದ್ವಾರ'ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ದಲಿತರಿಗೆ ದೇವೆಗೌಡರ ಕೊಡುಗೆ:

ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ ,ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ಅವರು ಹೇಳಿದರು.

ಕಲ್ಕುಣಿ ಗ್ರಾಮದಲ್ಲಿ ಸಮುದಾಯ ಭವನ:

ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕೇಂದ್ರ ಸಚಿವರಿಗೆ ಬೇಡಿಕೆ ಮಂಡಿಸಿದರು. ಇದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀ ನಂಜುಂಡ ಸ್ವಾಮಿ, ಮಲ್ಲು ಹಾಗೂ ತಾಲೂಕು ಬಹುಜನ ಸಮಾಜ ಪಕ್ಷದ ಮಾಜಿ ಅಧ್ಯಕ್ಷ ಚಿನ್ನಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X