ಮಂಡ್ಯ | ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಹತ್ಯೆ

ಮಂಡ್ಯ: ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದ ರೌಡಿಶೀಟರ್‌ನೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಪಾಲಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಪಾಲಹಳ್ಳಿ ಗ್ರಾಮದ ಸುಪ್ರೀತ್ ಅಲಿಯಾಸ್ ಸುಪ್ಪಿ ಕೊಲೆಯಾದ ರೌಡಿಶೀಟರ್, ಈತ ಕಳೆದ 15 ದಿನದ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.
ಶನಿವಾರ ತಡರಾತ್ರಿ ಸುಪ್ರೀತ್ ತನ್ನ ತೋಟದ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಲಾಗಿದೆ.
Next Story





