ಮಂಡ್ಯ | ಕಳ್ಳತನಕ್ಕೆ ಯತ್ನ ಆರೋಪ : ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿತ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರಮಂಡ್ಯ : ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದಿರುವುದು ವರದಿಯಾಗಿದೆ.
ಥಳಿತಕ್ಕೊಳಗಾದ ವ್ಯಕ್ತಿ ನಾಗಮಂಗಲ ಮೂಲದ 45 ವರ್ಷ ವಯಸ್ಸಿನ ಜಬೀ ಅಹ್ಮದ್ ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ
ಶನಿವಾರ ತಡರಾತ್ರಿ ರಾತ್ರಿ ಮನೆಯೊಂದಕ್ಕೆ ನುಗ್ಗಿ ಮೊಬೈಲ್ ಹೊತ್ತೋಯ್ದಿದ್ದ ನಂತರ, ರವಿವಾರ ಬೆಳಗ್ಗೆ ಮನೆಯೊಂದಕ್ಕೆ ಕಳ್ಳತನಕ್ಕೆ ಯತ್ನಿಸುವ ವೇಳೆ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ರೀರಂಗಪಟ್ಟಣ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
Next Story





