Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ತಮಿಳುನಾಡಿಗೆ ನೀರು ಹರಿಸಲು ಸೂಚನೆ...

ತಮಿಳುನಾಡಿಗೆ ನೀರು ಹರಿಸಲು ಸೂಚನೆ ಖಂಡಿಸಿ ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 July 2026 6:08 PM IST
share
ತಮಿಳುನಾಡಿಗೆ ನೀರು ಹರಿಸಲು ಸೂಚನೆ ಖಂಡಿಸಿ ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆ
ಕರವೇ, ರೈತಸಂಘ, ವಿವಿಧ ಸಂಘಟನೆಗಳ ಆಕ್ರೋಶ

ಮಂಡ್ಯ : 15 ದಿನಗಳವರೆಗೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರಕಾರಕ್ಕೆ ಸೂಚನೆ ನೀಡಿರುವುದನ್ನು ಖಂಡಿಸಿ ಜಿಲ್ಲೆಯಲ್ಲಿ ಬುಧವಾರವೂ ತೀವ್ರ ಪ್ರತಿಭಟನೆ ನಡೆಯಿತು.

ಬೆಂಗಳೂರು ಮೈಸೂರು ಹಳೆ ಹೆದ್ದಾರಿಯ ಸಂಜಯ ವೃತ್ತದಲ್ಲಿ ರೈತ ಸಂಘದ ವಿವಿಧ ಬಣಗಳ ಕಾರ್ಯಕರ್ತರು, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ತೀವ್ರವಾಗಿ ಖಂಡಿಸಿದರು. ಖಾಲಿ ಕೊಡಗಳನ್ನು ಪ್ರದರ್ಶಿಸಿ ರಸ್ತೆಯಲ್ಲಿ ಧರಣಿ ಕುಳಿತರು.

ಮಳೆ ಇಲ್ಲದೆ ಕಾವೇರಿಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಕುಡಿಯಲೂ ಸಾಕಾಗುವಷ್ಟು ನೀರು ಸಂಗ್ರಹವಿಲ್ಲ. ಸಮಿತಿಯ ತಜ್ಞರು ಜಲಾಶಯ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸದೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಸಮಿತಿಯ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪುವುದು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರವು ಸಮಿತಿಯ ಶಿಫಾರಸನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸಬಾರದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನದಟ್ಟು ಮಾಡಬೇಕು. ಒಂದು ವೇಳೆ ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ರಾಜ್ಯ ಉಪಾಧ್ಯಕ್ಷ ಮ.ಸೂ.ಚಿದಂಬರ್, ಶಂಕರೇಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಭಾರತಿ ಕುಮಾ‌ರ್, ಗೌರವಧ್ಯಕ್ಷೆ ಸುಜಾತ ಕೃಷ್ಣ, ಮದ್ದೂರು ತಾಲೂಕು ಅಧ್ಯಕ್ಷ ಮಣಿಗೆರೆ ರಾಮಚಂದ್ರೇಗೌಡ, ಪುಟ್ಟರಾಜು, ಪ್ರಭಾವತಿ ಬೋರೇಗೌಡ, ಶಿವಪ್ರಸಾದ್, ದೇವೆಗೌಡ, ಹರೀಶ್, ಉಮೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಮೊದಲಾದರಿದ್ದರು. ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

mandyaprotestCauvery water
share
ವಾರ್ತಾಭಾರತಿ
ವಾರ್ತಾಭಾರತಿ
Next Story
X