Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ: ಪೊಲೀಸ್ ಭದ್ರತೆಯಲ್ಲಿ‌...

ಮಂಡ್ಯ: ಪೊಲೀಸ್ ಭದ್ರತೆಯಲ್ಲಿ‌ ದೇವಾಲಯಗಳಿಗೆ ಪ್ರವೇಶಿಸಿ ಪೂಜೆ ಸಲ್ಲಿಸಿದ ಪರಿಶಿಷ್ಟರು

ವಾರ್ತಾಭಾರತಿವಾರ್ತಾಭಾರತಿ22 Dec 2025 9:18 PM IST
share
ಮಂಡ್ಯ: ಪೊಲೀಸ್ ಭದ್ರತೆಯಲ್ಲಿ‌ ದೇವಾಲಯಗಳಿಗೆ ಪ್ರವೇಶಿಸಿ ಪೂಜೆ ಸಲ್ಲಿಸಿದ ಪರಿಶಿಷ್ಟರು

ಮಂಡ್ಯ: ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜನಾಂಗದ ಮಹಿಳೆಯರು, ಪುರುಷರು ಸೋಮವಾರ ದೇವಾಲಯಗಳಿಗೆ ಪ್ರವೇಶಿಸಿಸಿ ಪೂಜೆ ಸಲ್ಲಿಸಿದರು.

ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿವೈಎಸ್ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಮತ್ತು ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ತೀರ್ಮಾಣದಂತೆ ಇಂದು(ಸೋಮವಾರ) ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಹಾಗೂ ಮುಖಂಡರ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿ ಪೂಜೆ ಸಲ್ಲಿಸಿದರು.

ಶಾಂತಿ ಸಭೆಯಲ್ಲಿ 5 ಬೇಡಿಕೆಗಳನ್ನು ಮಂಡಿಸಲಾಗಿತ್ತು. ಅದರಂತೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದೇವೆ. ಉಳಿದ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆಯನ್ನು ಜಿಲಾಡಳಿತ, ತಾಲೂಕು ಆಡಳಿತ ಭರವಸೆ ನೀಡಿದೆ ಎಂದು ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಇತರೆ ಪರಿಶಿಷ್ಟ ಮುಖಂಡರು ಇದ್ದರು. ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಇಲ್ಲಿವರೆಗೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.





Tags

mandyaScheduled Castepujatemple
share
ವಾರ್ತಾಭಾರತಿ
ವಾರ್ತಾಭಾರತಿ
Next Story
X