Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ಹೃದಯಾಘಾತದಿಂದ ಶಾಲೆಯ...

Mandya | ಹೃದಯಾಘಾತದಿಂದ ಶಾಲೆಯ ಆವರಣದಲ್ಲೇ ವಿದ್ಯಾರ್ಥಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ2 Sept 2026 11:50 PM IST
share
Mandya | ಹೃದಯಾಘಾತದಿಂದ ಶಾಲೆಯ ಆವರಣದಲ್ಲೇ ವಿದ್ಯಾರ್ಥಿ ಮೃತ್ಯು

ಮಂಡ್ಯ : ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಶಾಲೆಯ ಆವರಣದಲ್ಲೇ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕು ಸೋಮನಹಳ್ಳಿ ಗ್ರಾಮದ ಖಾಸಗಿ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಸೋಮನಹಳ್ಳಿ ಗ್ರಾಮದ ಎಸ್.ಸಿ.ಎಂ.ಎಂ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವೀರಮಣಿ (14) ಮೃತಪಟ್ಟ ವಿದ್ಯಾರ್ಥಿ.

ವೀರಮಣಿ, ಅಜ್ಜ-ಅಜ್ಜಿಯ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಬುಧವಾರ ಶಾಲೆಗೆ ಹಾಜರಾಗಿದ್ದ ಈತ, ಮಧ್ಯಾಹ್ನ ಊಟದ ವಿರಾಮದ ಸಮಯದಲ್ಲಿ ನೀರು ಕುಡಿಯುತ್ತಿದ್ದಾಗ ತಲೆತಿರುಗಿ ನೆಲಕ್ಕುರುಳಿದ ಎನ್ನಲಾಗಿದೆ.

ತಕ್ಷಣವೇ ಶಿಕ್ಷಕರು, ಬಾಲಕನನ್ನು ಶಾಲಾ ವಾಹನದಲ್ಲೇ ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಬಾಲಕನ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ, ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆತರಲಾಯಿತು. ಮಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ತಪಾಸಣೆ ನಡೆಸಿದಾಗ, ಬಾಲಕ ತೀವ್ರ ಹೃದಯಾಘಾತದಿಂದ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿದರು.

ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Studentheart attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X