ಮಂಗಳೂರು: ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕ ಖ್ಯಾತಿ ಪಡೆದಿದ್ದ ಆಶಾ ಪಂಡಿತ್ ನಿಧನ

ಮಂಗಳೂರು,ಜ.23: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ನಗರದ ನಾಗುರಿ ನಿವಾಸಿ ಆಶಾ ಪಂಡಿತ್ (63) ಜ.23ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ನಗರದ ನಾಗರಿ ಬಳಿ ಕ್ಯಾಂಟೀನ್ ನಡೆಸುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಮೂಲಕ ಸಕ್ರಿಯರಾಗಿದ್ದರು. ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಮೃತರು ಅಗಲಿದ್ದಾರೆ.
Next Story





