Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ನಗರ ದಕ್ಷಿಣ ವಿಧಾನ ಸಭಾ...

ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ | ಬೂತ್ ಸಂಖ್ಯೆ 161ರ ಬಿಎಲ್‌ಒ ಲಕ್ಷ್ಮಿಕಾಂತ್ ರಾವ್ ಕಾರ್ಯವೈಖರಿ ವಿರುದ್ಧ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ8 Sept 2026 10:18 PM IST
share
ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ | ಬೂತ್ ಸಂಖ್ಯೆ 161ರ ಬಿಎಲ್‌ಒ ಲಕ್ಷ್ಮಿಕಾಂತ್ ರಾವ್ ಕಾರ್ಯವೈಖರಿ ವಿರುದ್ಧ ಅಸಮಾಧಾನ

ಮಂಗಳೂರು, ಸೆ.8: ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಸಂಖ್ಯೆ 161ರಲ್ಲಿ ಬಿಎಲ್‌ಒ ಆಗಿ ಕಾರ್ಯನಿರ್ವಹಿಸುತ್ತಿರುವ ಲಕ್ಷ್ಮಿಕಾಂತ್ ರಾವ್‌ರ ಕಾರ್ಯವೈಖರಿಯ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಸ್‌ಐಆರ್ ಎನ್ಮುರೇಶನ್ ಪ್ರಕ್ರಿಯೆ ನಡೆಯುವ ಸಂದರ್ಭ ಈ ಭಾಗದ ಬಿಎಲ್‌ಒ ಆಗಿರುವ ಲಕ್ಷ್ಮಿಕಾಂತ್ ರಾವ್‌ಗೆ ಮತದಾರರ ವಿವರಗಳಲ್ಲಿ ಕಂಡುಬಂದಿದ್ದ ಹೊಂದಾಣಿಕೆ ಸಮಸ್ಯೆಗಳನ್ನು ಸರಿಪಡಿಸಲು ಸಾಕಷ್ಟು ಸಮಯವಕಾಶ ಇದ್ದರೂ ಕೂಡ ಸೂಕ್ತ ಕ್ರಮ ಕೈಗೊಳ್ಳದೆ ಕಾಲಹರಣ ಮಾಡಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ.

ಎನ್ಮುರೇಶನ್ ಫಾರ್ಮ್ ಪ್ರಕ್ರಿಯೆಯ ನಂತರ ಹೆಸರು ತಾಳೆ ಆಗಿರುವ ಮತದಾರರ ಪಟ್ಟಿ ಬಿಎಲ್‌ಒಗಳಿಗೆ ಲಭ್ಯವಾಗಿತ್ತು. ಇತರ ವಾರ್ಡ್‌ಗಳ ಅನೇಕ ಬೂತ್‌ಗಳಲ್ಲಿ ಬಿಎಲ್‌ಒಗಳು ಮತದಾರರಿಗೆ ಈ ಬಗ್ಗೆ ಸೂಕ್ತ ಮಾಹಿತಿ ನೀಡಿ, ಅಗತ್ಯ ದಾಖಲೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಕಾಲಕ್ಕೆ ಮನವರಿಕೆ ಮಾಡಿಕೊಟ್ಟ ಕಾರಣ ಹಲವಾರು ಮತದಾರರು ಸಮಯಕ್ಕೆ ಸರಿಯಾಗಿ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಾಗಿದೆ. ಆದರೆ ಬೂತ್ ಸಂಖ್ಯೆ 161ರಲ್ಲಿ ಸುಮಾರು 290ಕ್ಕೂ ಅಧಿಕ ಮತದಾರರು ನೋಟಿಸ್ ಪಡೆಯುವ ಪರಿಸ್ಥಿತಿ ಉಂಟಾಗಿದೆ. ಆ ಪೈಕಿ ಹಲವರು ಗಲ್ಫ್ ರಾಷ್ಟ್ರಗಳಲ್ಲಿ ಮತ್ತು ಕೆಲವರು ಹೊರ ಜಿಲ್ಲೆ/ರಾಜ್ಯಗಳಲ್ಲಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬಿಎಲ್‌ಒ ನಿರ್ಲಕ್ಷ್ಯದಿಂದ ನೋಟಿಸ್ ಸ್ವೀಕರಿಸುವ ಸಂದರ್ಭ ಮತದಾರರು ಸ್ವತಃ ಹಾಜರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಅನೇಕರು ತೊಂದರೆಗೊಳಗಾಗಿದ್ದಾರೆ. ಅರ್ಹ ಮತದಾರರಿಗೆ ಸಮಯಕ್ಕೆ ಸರಿಯಾಗಿ ಮಾಹಿತಿ ಮತ್ತು ಮಾರ್ಗದರ್ಶನ ದೊರೆತಿದ್ದರೆ ಈ ಸಮಸ್ಯೆ ಸೃಷ್ಟಿಯಾಗುವುದನ್ನು ತಪ್ಪಿಸಬಹುದಿತ್ತು ಎಂದು ಸಾರ್ವಜನಿಕರ ಅಭಿಪ್ರಾಯ ಪಟ್ಟಿದ್ದಾರೆ.

ಎನ್ಮುರೇಶನ್ ಫಾರ್ಮ್ ವಿತರಣೆ ವೇಳೆ ಬಿಎಲ್‌ಒ ಲಕ್ಷ್ಮಿಕಾಂತ್‌ರ ಕಾರ್ಯವೈಖರಿಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿತ್ತು. ಆದರೂ ಸಂಬಂಧಪಟ್ಟ ಅಧಿಕಾರಿಗಳು ಬಿಎಲ್‌ಒ ವಿರುದ್ಧ ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದೀಗ ಮತ್ತೆ ಹೊಂದಾಣಿಕೆಯಾಗದ ಸಮಸ್ಯೆಯಿಂದ ನೂರಾರು ಮತದಾರರು ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags

MangaloreLegislative AssemblyConstituencyBLOLaxmikant Raounhappyperformance
share
ವಾರ್ತಾಭಾರತಿ
ವಾರ್ತಾಭಾರತಿ
Next Story
X