Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜ.15 ರಿಂದ ಮೂರನೇ ವರ್ಷದ...

ಮಂಗಳೂರು: ಜ.15 ರಿಂದ ಮೂರನೇ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟಾ”

ವಾರ್ತಾಭಾರತಿವಾರ್ತಾಭಾರತಿ6 Nov 2024 1:09 PM IST
share
Photo of poster launch

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, “ಮೂರನೇ ವರ್ಷದ ಸ್ಟ್ರೀಟ್ ಫುಡ್ ಕಾರ್ಯಕ್ರಮದ ದಿನಾಂಕ ಘೋಷಣೆ ಮಾಡಲು ಇಲ್ಲಿರುವ ದೇವರ ಮಕ್ಕಳ ಎದುರು ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮಕ್ಕಳಿಗೆ ವಿಶೇಷ ಆಹಾರ, ಆಟವಾಡಲು ವ್ಯವಸ್ಥೆ ಕಲ್ಪಿಸಿ ಅವರ ಸಂಭ್ರಮದಲ್ಲಿ ಭಾಗಿಯಾಗಿದ್ದೇವೆ. ಈ ಬಾರಿ ಜ.15ರಿಂದ 19ರವರೆಗೆ 5 ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೇಸ್ಟಾ ಜರುಗಲಿದೆ. ಕಳೆದ ಬಾರಿಯಂತೆ ನಾರಾಯಣಗುರು ಸರ್ಕಲ್, ಪಬ್ಬಾಸ್ ಐಸ್ ಕ್ರೀಮ್, ಹಿಂದಿ ಪ್ರಚಾರ ಸಮಿತಿ ಸುತ್ತಮುತ್ತಲಿನ ಮಾರ್ಗ ಹಾಗೂ ಕರಾವಳಿ ಉತ್ಸವ ಮೈದಾನದಲ್ಲಿ ಆಹಾರಮೇಳ ಆಯೋಜಿಸಲಾಗಿದೆ. ಇದರ ಜೊತೆಗೆ ಮಕ್ಕಳಿಗೆ ವಿಶೇಷ ಪ್ಲೇ ಏರಿಯಾ, ಮನೋರಂಜನೆ ಕಾರ್ಯಕ್ರಮ, ಆರ್ಕೆಸ್ಟ್ರಾ, ಹುಟ್ಟುಹಬ್ಬ ಆಚರಣೆ, ಸೆಲ್ಫಿ ಝೋನ್ ಸಹಿತ ವಿವಿಧ ಕಾರ್ಯಕ್ರಮಗಳನ್ನು ಸ್ಥಳದಲ್ಲಿ ಆಯೋಜಿಸಲಾಗಿದೆ.

ಪ್ರತಿನಿತ್ಯ ಸಂಜೆ 4ಗಂಟೆಯಿಂದ ರಾತ್ರಿ 10:30 ರವರೆಗೆ ನಡೆಯಲಿದೆ. ಪ್ರಾರಂಭ ಮತ್ತು ಅಂತ್ಯದ ದಿನಗಳಲ್ಲಿ ಮಧ್ಯಾಹ್ನ ಸ್ವಲ್ಪ ಬೇಗನೆ ಪ್ರಾರಂಭಿಸಿ ರಾತ್ರಿ 11 ಗಂಟೆಯವರೆಗೆ ಏರ್ಪಡಿಸಲಾಗಿದೆ. 250ಕ್ಕೂ ಹೆಚ್ಚು ಫುಡ್ ಸ್ಟಾಲ್ ಗಳಲ್ಲಿ ಕರಾವಳಿಯ ವಿಶೇಷ ತಿನಿಸುಗಳು ಮಾತ್ರವಲ್ಲದೆ ಬೇರೆ ಕಡೆಯ ಆಹಾರವನ್ನು ಸವಿಯಲು ಅವಕಾಶ ಕಲ್ಪಿಸಲಾಗಿದೆ. ವೆಜ್ ಮತ್ತು ನಾನ್ ವೆಜ್ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಇದೆ. ಅಂಗಡಿಗಳನ್ನು ಹಾಕಲು ನೆಲ ಬಾಡಿಗೆ ವ್ಯವಸ್ಥೆ ಹೊರತುಪಡಿಸಿ ಕಳೆದ ಬಾರಿಯಂತೆ ಪ್ರಾಫಿಟ್ ಶೇರಿಂಗ್ ವ್ಯವಸ್ಥೆಯಿಲ್ಲ“ ಎಂದರು.

ನಳಿನ್ ಕುಮಾರ್ ಕಟೀಲ್ ಮಾತನಾಡಿ, “ಮಂಗಳೂರಿನಲ್ಲಿ ಹಿಂದಿನ ಎರಡು ಫುಡ್ ಫೆಸ್ಟಿವಲ್ ಯಶಸ್ವಿಯಾಗಿದ್ದು ಇದರಿಂದ ರಾಜ್ಯದೆಲ್ಲೆಡೆ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇಂತಹ ಜನಮನ್ನಣೆ ಪಡೆದಿರುವ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜನೆಯಾಗುತ್ತಿರುವುದು ಖುಷಿಯ ವಿಚಾರ. ಕಾರ್ಯಕ್ರಮದ ಮುಹೂರ್ತ ಇಂದು ಚೇತನಾ ವಿಶೇಷ ಶಾಲೆಯಲ್ಲಿ ನಡೆದಿದ್ದು ಮತ್ತೊಮ್ಮೆ ಜನರ ಪ್ರೀತಿಯನ್ನು ಪಡೆಯಲಿ. ಮಂಗಳೂರಿನ ವಿಶೇಷ ಆಹಾರ ಖಾದ್ಯಗಳು ಇಂದು ಎಲ್ಲೆಡೆ ಪ್ರಸಿದ್ಧಿಯನ್ನು ಪಡೆದಿದ್ದು ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ಸೊಗಡು ಪರಿಚಯಗೊಳ್ಳಲಿ“ ಎಂದರು.

ವೇದಿಕೆಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X