Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಆಝಾದ್ ಯೂತ್ ಕಲ್ಚರಲ್...

ಮಂಗಳೂರು: ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್‌ಗೆ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ1 Nov 2025 6:44 PM IST
share
ಮಂಗಳೂರು: ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ಆಝದ್ ಯೂತ್ ಕಲ್ಚರಲ್ ಅಸೋಸಿಯೇಷನ್ (ರಿ) ಇದರ ಹಲವು ವರ್ಷಗಳ ಸಾಮಾಜಿಕ ಕಾರ್ಯ ನಿರ್ವಹಣೆಗಳನ್ನು ಪರಿಗಣಿಸಿ ಸರ್ಕಾರ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ.

1999ರಲ್ಲಿ ಸ್ಥಾಪನೆಗೊಂಡ ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್(ರಿ) ಪ್ರಾರಂಭದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಮೀಸಲಾಗಿದ್ದ ತಮ್ಮ ಕಾರ್ಯ ಕ್ಷೇತ್ರವನ್ನು ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೂ ವಿಸ್ತರಿಸಿತು. ಈ ಪ್ರದೇಶದ ಬಡಜನರ ನೋವು ನಲಿವುಗಳಿಗೆ ಸ್ಪಂದಿಸಿ ಜನಪರ ಸಮಾಜ ಸೇವಾ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದೆ.

ಸಂಸ್ಥೆಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಸಮಾಜಕ್ಕೆ ಸುಸಜ್ಜಿತವಾದ ಯಂತ್ರೋಪಕರಣವನ್ನು ಹೊಂದಿರುವ ಉಚಿತ ಆಂಬುಲೆನ್ಸ್ ಸೇವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ನಾವು ಕಳೆದ 25 ವರ್ಷಗಳಿಂದ ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಜಾತಿ, ಧರ್ಮ ಬೇಧವಿಲ್ಲದೆ ಸರ್ವಧರ್ಮೀಯರ ಸೇವೆ ಮಾಡುತ್ತಾ ಬಂದಿದ್ದೇವೆ ಎಂದು ಸಂಸ್ಥೆ ತಿಳಿಸಿದೆ.


ಸಂಸ್ಥೆಯ ಕಾರ್ಯ ಚಟುವಟಿಕೆಗಳು:-

ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವವನ್ನು ವರ್ಷಂಪ್ರತಿ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುತ್ತಾ ಬರುತ್ತಿದ್ದೇವೆ.

ಅಶಕ್ತ ಹಾಗೂ ನಿರ್ಗತಿಕ ಕುಟುಂಬಗಳ ಬಡ ಹೆಣ್ಣುಮಕ್ಕಳ ಮದುವೆಗೆ ಆರ್ಥಿಕ ಸಹಾಯವನ್ನು ನೀಡುತ್ತಾ ಬಂದಿರುತ್ತೇವೆ.

ಸರಕಾರದ ಯೋಜನೆಗಳಾದ ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ ಮುಂತಾದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ನಮ್ಮ ಸಂಸ್ಥೆಯು ಮುಖ್ಯ ಪಾತ್ರ ವಹಿಸಿರುತ್ತದೆ.

ಕೊರೋನಾ ಸಂದರ್ಭದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲಾ ಧರ್ಮದವರ ಸುಮಾರು 500 ಕುಟುಂಬಗಳಿಗೆ ಉಚಿತ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.

ಕೋವಿಡ್ ಕೇರ್ ಸೆಂಟರನ್ನು ತೆರೆದು ಪರಿಸರದ ಸರ್ವ ಧರ್ಮೀಯರಿಗೂ ಉಚಿತ ಔಷಧಿ, ಆಕ್ಸಿಜನ್ ಮತ್ತು ಆಂಬುಲೆನ್ಸ್ ಸೇವೆಯನ್ನು ಒದಗಿಸಿರುತ್ತೇವೆ. ಮಾತ್ರವಲ್ಲದೆ ಜಾತಿ, ಮತ ಧರ್ಮ ಬೇಧವಿಲ್ಲದೆ ಕೊರೋನಾದಲ್ಲಿ ನಿಧನರಾದವರ ಹಲವಾರು ಮೃತ ದೇಹಗಳ ಅಂತ್ಯ ಸಂಸ್ಕಾರವನ್ನು ಅವರವರ ಧರ್ಮಗಳ ವಿಧಿ ವಿಧಾನಗಳಿಗೆ ಅನುಸಾರವಾಗಿ ಬಹಳ ವ್ಯವಸ್ಥಿತ ರೀತಿಯಲ್ಲಿ ಏರ್ಪಡಿಸಿ ಎಲ್ಲಾ ಜಾತಿ ಧರ್ಮದವರ ಪ್ರಶಂಸೆಗೆ ಪಾತ್ರರಾಗಿದ್ದೇವೆ.

ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಸಂಘಟಿಸಿ ಸುಮಾರು 300 ಜನ ರಕ್ತದಾನಿಗಳಿಂದ ರಕ್ತ ಸಂಗ್ರಹಿಸಿ ರಕ್ತದ ಅವಶ್ಯಕತೆ ಇರುವವರಿಗೆ ನೀಡಲಾಗಿದೆ.

ತೋಕೂರು ರೈಲ್ವೆ ನಿಲ್ದಾಣದ ಬಳಿ ಒಬ್ಬ ಹುಡುಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ತೀವ್ರ ತರಹದ ಗಾಯಾಳಾದ ಸಂದರ್ಭ ಹುಡುಗನ ಚಿಕಿತ್ಸೆಯ ಖರ್ಚು ಸುಮಾರು 7,00,000 ರೂ. ದಾನಿಗಳ ಸಹಕಾರದಿಂದ ನಮ್ಮ ಸಂಸ್ಥೆಯ ವತಿಯಿಂದ ನೀಡಿರುತ್ತೇವೆ.

ಹುಬ್ಬಳ್ಳಿಯ ವ್ಯಕ್ತಿಯೊಬ್ಬರ ಶವ ಕೆಂಜಾರು ಗ್ರಾಮದ ಪೇರಾ ಮಸೀದಿಯ ಮುಂಭಾಗದ ನದಿಯಲ್ಲಿ ತೇಲಾಡುತ್ತಿದ್ದ ಸಂದರ್ಭ ಪರಿಸರದವರು ನಮಗೆ ತಿಳಿಸಿದ ತಕ್ಷಣ ಆ ವ್ಯಕ್ತಿಯ ಶವವನ್ನು ನಮ್ಮ ಸಂಸ್ಥೆಯ ಆಂಬುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದೇವೆ. ಈ ರೀತಿ ನಮ್ಮ ಆಂಬುಲೆನ್ಸ್ ಸೇವೆ ಎಲ್ಲಾ ಜಾತಿ, ಮತ ಧರ್ಮದವರಿಗೂ ಕ್ಲಪ್ತ ಸಮಯಕ್ಕೆ ಲಭ್ಯವಾಗುತ್ತದೆ.

ಈವರೆಗೂ ದಾನಿಯೊಬ್ಬರು ನಮ್ಮ ಉಚಿತ ಆಂಬುಲೆನ್ಸ್ ಸೇವೆಗೆ ಪೆಟ್ರೋಲ್ ನೀಡಿ ಸಹಕರಿಸುತ್ತಾ ಬಂದಿರುತ್ತಾರೆ. ಅವರಿಗೆ ನಾವು ಋಣಿಯಾಗಿದ್ದೇವೆ. ಆಯುಷ್ಮಾನ್ ಮತ್ತು ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವನ್ನು ಬಹಳ ಯಶಸ್ವಿಯಾಗಿ ಏರ್ಪಡಿಸಿರುತ್ತೇವೆ. ಊರಿನ ಮತ್ತು ಪರವೂರಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಇದರ ಪ್ರಯೋಜನವನ್ನು ಪಡೆದಿದೆ ಎನ್ನಲು ಅಭಿಮಾನ ಪಡುತ್ತೇವೆ.

ದಾನಿಗಳ ಸಹಕಾರದಿಂದ ಬಡ ಹಾಗೂ ನಿರ್ಗತಿಕ ಕುಟುಂಬಗಳ ಸುಮಾರು 500 ವಿದ್ಯಾರ್ಥಿಗಳಿಗೆ ಅಂದಾಜು 3,00,000 ರೂ. ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮಾಡುತ್ತಾ ಬಂದಿರುತ್ತೇವೆ.

ಅದೇ ರೀತಿ ಉನ್ನತ ವಿದ್ಯಾಭ್ಯಾಸ ಮಾಡಲು ಉತ್ಸುಕರಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಶುಲ್ಕ ಭರಿಸಲು ದಾನಿಗಳ ಸಹಕಾರದಿಂದ ಸುಮಾರು 5,00,000 ರೂ. ರಷ್ಟು ನೆರವು ನೀಡಿರುತ್ತೇವೆ.

ಮುಂದಿನ ಯೋಜನೆಗಳು:-

ಪೋಷಕ ನಿಧಿ:-

ತೀರಾ ಬಡ ಹಾಗೂ ನಿರ್ಗತಿಕ ಕುಟುಂಬಗಳ ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆ ಶುಲ್ಕ ಪಾವತಿಸಲು ಅಸಾಧ್ಯ ವಾದ ಸಂದರ್ಭದಲ್ಲಿ ಅಂತಹವರ ವೈದ್ಯಕೀಯ ವೆಚ್ಚವನ್ನು ಭರಿಸಲು ವಾರ್ಷಿಕ ಸುಮಾರು ಹತ್ತು ಲಕ್ಷ ರೂ. ಪೋಷಕ ನಿಧಿಯನ್ನು ನೀಡುತ್ತಾ ಬಂದಿದ್ದೇವೆ.

ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ:-

ಪರಿಸರದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಪ್ರೌಢ ಶಿಕ್ಷಣ, ಕಾಲೇಜು ಶಿಕ್ಷಣ, ಹಾಗೂ ವೃತ್ತಿ ಪರ ಕೋರ್ಸುಗಳಿಗೆ ಅನುಕೂಲವಾಗುವಂತಹ ಆರ್ಥಿಕ ಸಹಕಾರವನ್ನು ನೀಡಲು ವಾರ್ಷಿಕ ಸುಮಾರು ಐದು ಲಕ್ಷ ರೂಪಾಯಿ ದಾನಿಗಳ ಮುಖಾಂತರ ಸಂಗ್ರಹಿಸಿ ನೀಡುತ್ತಾ ಬಂದಿರುವೆವು ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X