Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಕಬ್ಬು, ತೈಲ ಬೀಜಗಳ ನಿರ್ದೇಶನಾಲಯದ...

ಕಬ್ಬು, ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕ ಅರವಿಂದ ಕುಮಾರ್ ರಾವತ್ ರನ್ನು ಭೇಟಿಯಾದ ಸಚಿವ ಆರ್.ಬಿ. ತಿಮ್ಮಾಪುರ

ವಾರ್ತಾಭಾರತಿವಾರ್ತಾಭಾರತಿ19 Nov 2025 2:57 PM IST
share
ಕಬ್ಬು, ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕ ಅರವಿಂದ ಕುಮಾರ್ ರಾವತ್ ರನ್ನು ಭೇಟಿಯಾದ ಸಚಿವ ಆರ್.ಬಿ. ತಿಮ್ಮಾಪುರ

ಬಾಗಲಕೋಟೆ: ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ‌ ಅವರು ಇಂದು ರಾಜಧಾನಿ ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಬ್ಬು ಮತ್ತು ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕರಾದ ಅರವಿಂದ ಕುಮಾರ್ ರಾವತ್ ಅವರನ್ನು ಭೇಟಿ ಮಾಡಿ, ರಾಜ್ಯದ ಕಬ್ಬು ಬೆಳೆಗಾರರಿಗೆ, ವಿಶೇಷವಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೈತರಿಗೆ ಎದುರಾಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆಸಿದರು.

ಸಭೆಯಲ್ಲಿ ಸಚಿವ ತಿಮ್ಮಾಪೂರ ಅವರು, ಕಳೆದ ಕೆಲವು ವರ್ಷಗಳಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಕಬ್ಬಿನ ಬೆಲೆ ಕುಸಿತ, ಸಕ್ಕರೆ ಕಾರ್ಖಾನೆಗಳ ಸಾಲ ಮರುಪಾವತಿ ವಿಳಂಬ, ಕನಿಷ್ಠ ಬೆಂಬಲ ಬೆಲೆ (ಎಫ್‌ಆರ್‌ಪಿ) ಹೆಚ್ಚಳದ ಕೊರತೆ, ರಫ್ತು ನೀತಿಯಲ್ಲಿ ಏರ್ಪಡುತ್ತಿರುವ ಬದಲಾವಣೆಗಳಿಂದಾಗಿ ಉಂಟಾಗುತ್ತಿರುವ ಅನಿಶ್ಚಿತತೆ ಹಾಗೂ ಮುಧೋಳ ಸೇರಿದಂತೆ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ವಿಶೇಷವಾಗಿ ತಲುಪುತ್ತಿರುವ ತೊಂದರೆಗಳನ್ನು ಕೇಂದ್ರ ಅಧಿಕಾರಿಗಳ ಗಮನಕ್ಕೆ ತಂದರು.

“ಕರ್ನಾಟಕದಲ್ಲಿ ಕಬ್ಬು ಬೆಳೆ ರೈತರ ಜೀವನಾಡಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಹು ಭಾಗದಲ್ಲಿ ಸಾವಿರಾರು ರೈತರು ಕಬ್ಬು ಬೆಳೆಯ ಮೇಲೆಯೇ ಅವಲಂಬಿತರಾಗಿದ್ದಾರೆ. ಆದರೆ ಪ್ರಸ್ತುತ ಸ್ಥಿತಿಯಲ್ಲಿ ಅವರಿಗೆ ನ್ಯಾಯ ದೊರಕುತ್ತಿಲ್ಲ. ಕೇಂದ್ರ ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ರೈತರ ಹಿತ ಕಾಯಬೇಕು” ಎಂದು ಸಚಿವರು ನಿರ್ದೇಶಕರಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಬ್ಬಿನ ಎಫ್‌ಆರ್‌ಪಿ ಯುಕ್ತಿಯುಕ್ತ ಹೆಚ್ಚಳ, ಸಕ್ಕರೆ ರಫ್ತು ನೀತಿಯಲ್ಲಿ ಸ್ಥಿರತೆ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಸಹಾಯಧನ ಮತ್ತು ರೈತರ ಬಾಕಿ ಪಾವತಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವರು ಒತ್ತಡ ಹೇರಿದರು.

ನಿರ್ದೇಶಕ ಅರವಿಂದ ಕುಮಾರ್ ರಾವತ ಅವರು ಸಚಿವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಕೇಂದ್ರ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಬಾಗಲಕೋಟ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಆನಂದ ಹಟ್ಟಿ ಅವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X