Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ:...

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Sept 2025 12:41 PM IST
share
ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿದ್ದರಾಮಯ್ಯ

ಮೈಸೂರು, ಸೆ.22: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಎಸೆದರು.

ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ದಸರಾ ಉದ್ಘಾಟನೆಯ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರನ್ನು ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಅವರೊಬ್ಬರು ಮುಸ್ಲಿಮ್ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.

ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ ಎಂದು ಟೀಕಾಕಾರರಿಗೆ ಚಾಟಿ ಬೀಸಿದ ಸಿದ್ದರಾಮಯ್ಯ, ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.

ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ:

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ಬಿಜೆಪಿಯವರು ಗ್ಯಾರಂಟಿ ಫಲಾನುಭವಿಗಳಲ್ವ: ಸಿಎಂ ಪ್ರಶ್ನೆ

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X