ಮೈಸೂರು ದಸರಾ: ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಅರಮನೆ ಆವರಣದಲ್ಲಿ ಸಾವಿರಾರು ಮಂದಿ ಚಿನ್ನದ ಅಂಬಾರಿ ಹೊತ್ತು ಸಾಗುವ ಶ್ರೀಚಾಮುಂಡೇಶ್ವರಿ ದೇವಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮಧ್ಯಾಹ್ನ 1 ಗಂಟೆಯಿಂದ 1:18ರೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಮುಂಭಾಗದಲ್ಲಿ ನಂದಿ ಕಂಬಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 4:42ರಿಂದ 5:16ರ ಮಧ್ಯೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.
ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯೊಂದಿಗೆ ಅಭಿಮನ್ಯು ನೇತೃತ್ವದ ಗಜಪಡೆಗಳು ಬನ್ನಿ ಮಂಟಪದ ವರಗೆ ಸಾಗಲಿವೆ.
ಜಂಬೂ ಸವಾರಿ ವೀಕ್ಷಣೆಗೆ ಅರಮನೆ ಆವರಣದಿಂದ ಬನ್ನಿ ಮಂಟಪದ ವರೆಗೆ ಸುಮಾರು ಐದು ಕಿ.ಮೀ.ಗೂ ಹೆಚ್ಚು ದೂರ ಸಾಗಲಿದ್ದು, ರಸ್ತೆಯ ಇಕ್ಕೆಗಳಲ್ಲಿ ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.
Next Story





