Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಂಬೂ ಸವಾರಿ ಚಾಮುಂಡೇಶ್ವರಿ ರಥೋತ್ಸವ...

ಜಂಬೂ ಸವಾರಿ ಚಾಮುಂಡೇಶ್ವರಿ ರಥೋತ್ಸವ ದಿನಕ್ಕೆ ಬದಲಾಯಿಸಿ; ರಾಜ್ಯ ಸರಕಾರಕ್ಕೆ ಪ್ರಮೋದಾದೇವಿ ಒಡೆಯರ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ26 Oct 2026 12:54 AM IST
share
ಜಂಬೂ ಸವಾರಿ ಚಾಮುಂಡೇಶ್ವರಿ ರಥೋತ್ಸವ ದಿನಕ್ಕೆ ಬದಲಾಯಿಸಿ; ರಾಜ್ಯ ಸರಕಾರಕ್ಕೆ ಪ್ರಮೋದಾದೇವಿ ಒಡೆಯರ್ ಸಲಹೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಯಲ್ಲಿ ವಿಜಯ ದಶಮಿಯಂದು ನಡೆಯುವ ಜಂಬೂಸವಾರಿ ಮೆರವಣಿಗೆಯನ್ನು ಚಾಮುಂಡೇಶ್ವರಿ ರಥೋತ್ಸವದ ದಿನಕ್ಕೆ ಬದಲಾಯಿಸುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಸಂಬಂಧ ರವಿವಾರ ನಾಲ್ಕು ಪುಟಗಳ ಸುದೀರ್ಘ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರಕಾರಕ್ಕೆ ಕೆಲವು ಸಲಹೆ ಸೂಚನೆ ಮತ್ತು ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಟ್ಟದಲ್ಲಿ ನಡೆಯುವ ರಥೋತ್ಸವದ ದಿನದಂದೇ, ಸರಕಾರವು ಶ್ರೀ ಚಾಮುಂಡೇಶ್ವರಿ ಅಮ್ಮನವರ ಅಂಬಾರಿ ಮೆರವಣಿಗೆಯನ್ನು ನಡೆಸಬಹುದು. ಅಂದು ಸಂಜೆ ಸೂಕ್ತ ಸಮಯದಲ್ಲಿ ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆಯನ್ನು ನಡೆಸುವುದು ಸೂಕ್ತವಾಗಿರುತ್ತದೆ ಎಂದಿದ್ದಾರೆ.

ವಿಜಯ ದಶಮಿಯಂದು ಅರಮನೆಯಿಂದ ಜಂಬೂಸವಾರಿ ಮೆರವಣಿಗೆ ನಡೆಸುವುದರಿಂದ ಅರಮನೆಯೊಳಗೆ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಆಚರಣೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಮನೆಯ ಧಾರ್ಮಿಕ ಸಂಪ್ರದಾಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ದಸರಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಖಂಡಿತವಾಗಿಯೂ ಸ್ವೀಕಾರಾರ್ಹವಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸರಕಾರಕ್ಕೆ ನೀಡಿದ್ದಾರೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಸಲ್ಲಿಸಬೇಕಾದ ಗೌರವ ಮತ್ತು ಧಾರ್ಮಿಕ ಸಂಪ್ರದಾಯಗಳಿಗೆ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ರಥೋತ್ಸವದ ದಿನವೇ ಅಂಬಾರಿ ಮೆರವಣಿಗೆಯನ್ನು ಆಯೋಜಿಸುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಪ್ರಮೋದಾದೇವಿ ಒಡೆಯರ್ ಸಲಹೆ ನೀಡಿದ್ದಾರೆ.

ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಉತ್ಸವವಲ್ಲ; ಅದು ರಾಜವಂಶದ ಸಂಪ್ರದಾಯ, ಧಾರ್ಮಿಕ ಆಚರಣೆ ಹಾಗೂ ನಾಡದೇವತೆಯ ಆರಾಧನೆಯೊಂದಿಗೆ ಬೆಸೆದುಕೊಂಡಿರುವ ಐತಿಹಾಸಿಕ ಪರಂಪರೆಯಾಗಿದೆ. ಹೀಗಾಗಿ ಅರಮನೆಯ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಅಡ್ಡಿಯಾಗದಂತೆ ದಸರಾ ಕಾರ್ಯಕ್ರಮಗಳ ವೇಳಾಪಟ್ಟಿ ಯನ್ನು ರೂಪಿಸುವುದು ಅಗತ್ಯ ಎಂಬುದು ಅವರ ನಿಲುವಾಗಿದೆ.

‘ಪೊಲೀಸ್ ಇಲಾಖೆಯಿಂದ ನಿರ್ಲಕ್ಷ್ಯ’

ಮೈಸೂರು ದಸರಾ ಮಹೋತ್ಸವದ ಆಚರಣೆ ಹಾಗೂ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸರಕಾರಿ ಇಲಾಖೆಗಳ ಅಧಿಕಾರಿಗಳ ನಡೆ, ಪೊಲೀಸ್ ಇಲಾಖೆಯ ಸಂವಹನದ ಕೊರತೆ ಮತ್ತು ಸಮನ್ವಯದ ಅಭಾವದ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿನ್ನದ ಅಂಬಾರಿಯ ಭದ್ರತೆ, ವಜ್ರಮುಷ್ಠಿ ಕಾಳಗ ರದ್ದು, ರಾಜಮನೆತನದ ಅತಿಥಿಗಳಿಗಾಗಿ ಮೀಸಲಿಟ್ಟ ಸ್ಥಳದ ಅತಿಕ್ರಮಣ ಹಾಗೂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗಿದೆ ಎಂಬ ಹಲವು ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅಂಬಾರಿಯ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳ ಓಡಾಟ ನಡೆದಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಅಂಬಾರಿಯ ಸಮೀಪದಲ್ಲಿದ್ದರು. ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಅನೇಕರು ಅಂಬಾರಿಯ ಬಳಿ ಸುಳಿದಾಡಿರುವುದು ಅದರ ಭದ್ರತೆಗೆ ಧಕ್ಕೆ ಉಂಟುಮಾಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೈಸೂರು ದಸರಾದ ಅಂಬಾರಿ ಹೊರುವ ಆನೆಯ ವಿಷಯವನ್ನು ನಮ್ಮಿಂದ ಮುಚ್ಚಿಡಲಾಗಿತ್ತು. ಕೊನೆಯ ಕ್ಷಣದವರೆಗೂ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಕಾರ್ಯಕ್ರಮಕ್ಕೆ ಐದು ದಿನಗಳಿರುವಾಗ, ಅಂಬಾರಿ ಹೊರುವ ಜವಾಬ್ದಾರಿಯನ್ನು ಯಾವ ಆನೆಗೆ ನೀಡಲಾಗಿದೆ ಎಂದು ತಿಳಿಸುವಂತೆ ನಾನು ಸ್ವತಃ ಡಿಸಿಎಫ್ ಅವರ ಬಳಿ ಕೇಳಬೇಕಾಯಿತು. ಯಾವುದೇ ಕಾರಣವಿಲ್ಲದೆ, ಈ ಪರಿಸ್ಥಿತಿಯು ನಮಗೆ ತೀವು ಒತ್ತಡವನ್ನು ಉಂಟುಮಾಡಿತು.

-ಪ್ರಮೋದಾದೇವಿ ಒಡೆಯರ್, ರಾಜವಂಶಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X