ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ನವರಾತ್ರಿ ಉತ್ಸವಕ್ಕೆ ಖ್ಯಾತ ಲೇಖಕಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸುವರು.
ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ಭವ್ಯ ವೇದಿಕೆಯಲ್ಲಿ ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು 10:10ರಿಂದ 10:40ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ನಾಡ ದೇವತೆ ಶ್ರೀಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಲಿದೆ.
ಚಾಮುಂಡೇಶ್ವರಿ ಬೆಟ್ಟದ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ರ್ಯಾಪಿಡ್ ಆಕ್ಷನ್ ಫೋರ್ಸ್ ಚಾಮುಂಡಿ ಬೆಟ್ಟದ ಸುತ್ತಲೂ ಕಣ್ಗಾವಲಿರಿಸಿದೆ.
ಇನ್ನು ಕೆಲವು ಕ್ಷಣಗಳಲ್ಲಿ ವೇದಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೇಖಕಿ ಬಾನು ಮುಷ್ತಾಕ್ ಸೇರಿದಂತೆ ಹಲವು ಗಣ್ಯರು ಆಗಮಿಸುವುದನ್ನು ಎಲ್ಲರೂ ಕಾತರದಿಂದ ಎದುರು ನೋಡುತ್ತಿದ್ದಾರೆ.







