Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ...

ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Jan 2026 4:20 PM IST
share
ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ
► "ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಬರಬೇಕು" ► ರಾಜ್ಯ ಕುಂಬಾರರ ಮಹಾ ಸಮ್ಮೇಳನ ಕಾರ್ಯಕ್ರಮ

ಮೈಸೂರು : ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಮೈಸೂರು ಇವರ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ ಸಮಾಜದವರು ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ ಕಲೆಯ ಪರಿಣಿತಿ ವಿಶೇಷವಾಗಿದೆ. ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ. 12 ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಮತ್ತು ದಾಸೋಹಗಳನ್ನು ಸಮಾಜಕ್ಕೆ ನೀಡಿದರು. ಚತುರ್ವರ್ಣ ವ್ಯವಸ್ಥೆ ಹಿಂದಿನಿಂದಲೂ ಬಂದಿರುವ ವ್ಯವಸ್ಥೆ. ಆರ್ಥಿಕವಾಗಿ ಹಿಂದುಳಿದ ಶೂದ್ರ ವರ್ಗದವರು ಜನಸಂಖ್ಯೆಯ ಸುಮಾರು ಶೇ.80 ರಷ್ಟಿದ್ದುಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ :

ಶಿಕ್ಷಣದ ಮಹತ್ವವನ್ನು ಮನಗಂಡು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿದರು. ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದ ಮೇಲೆ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿತು. ಸ್ವಾತಂತ್ರ್ಯ ಬಂದ ನಂತರ ನಮ್ಮಲ್ಲಿ ಅನೇಕರು ವಿದ್ಯಾವಂತರಾಗಲು ಸಾಧ್ಯವಾಯಿತು ಎಂದರು.

ವಿದ್ಯೆ ಯಾರ ಸ್ವತ್ತೂ ಅಲ್ಲ :

ಎಲ್ಲರೂ ವಿದ್ಯಾವಂತರಾಗಲೇಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಬರಬೇಕು ಎಂದರು. ವಿದ್ಯೆ ಯಾರ ಸ್ವತ್ತೂ ಅಲ್ಲ. ಪಟ್ಟಭದ್ರ ಹಿತಾಸಕ್ತರು, ವಿದ್ಯೆ ಒಂದು ವರ್ಗಕ್ಕೆ ಮಾತ್ರ ಸೀಮಿತ ಎನ್ನುವ ಭಾವನೆಯನ್ನು ಬಿತ್ತಿದ್ದರು. ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದರು. ನಿಮ್ಮಲ್ಲೂ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಗಳಾಗಬೇಕು ಎಂದರು.

ಜಾತಿವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು :

ಬೇಡರ ಜಾತಿಗೆ ಸೇರಿದ ವಾಲ್ಮೀಕಿ ರಾಮಾಯಣ ಬರೆದರು. ಬೆಸ್ತರ ಜಾತಿಗೆ ಸೇರಿದ ವ್ಯಾಸ ಮಹರ್ಷಿಗಳು ಮಹಾಭಾರತವನ್ನು ಬರೆದರು. ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ರತ್ನಪ್ಪ ಭರಮಪ್ಪ ಕುಂಬಾರರು ಸಮುದಾಯದ ಧೀಮಂತ ನಾಯಕರಾಗಿದ್ದರು. ಜಾತಿವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು. ನಾನು ವಕೀಲ ಶಿಕ್ಷಣ ಪಡೆದಿದ್ದರಿಂದಲೇ ಇಂದು ಮುಖ್ಯಮಂತ್ರಿಯಾಗಿ ನಿಮ್ಮೆದುರಿರಲು ಸಾಧ್ಯವಾಗಿದೆ. ಮಹಾನ್ ಜ್ಞಾನಿಯಾಗಿದ್ದ ಶ್ರೀ ನಾರಾಯಣ ಗುರುಗಳು, ಒಂದೇ ಧರ್ಮ, ಒಂದೇ ಜಾತಿ ಎಂದು ಪ್ರತಿಪಾದಿಸಿದರು. ಅಸ್ಪೃಶ್ಯತೆಯಿಂದ ದೇಗುಲಗಳಿಗೆ ಪ್ರವೇಶ ನಿರ್ಬಂಧಿಸುತ್ತಿದ್ದ ಕಾಲದಲ್ಲಿ, ‘ನಿಮ್ಮದೇ ದೇವಾಲಯಗಳನ್ನು ನಿರ್ಮಿಸಿಕೊಳ್ಳಿ’ ಎಂದು ಜನರಿಗೆ ಕರೆ ನೀಡಿದ್ದರು. ಸ್ವಾತಂತ್ರ್ಯ ಯಶಸ್ವಿಯಾಗಲು ಶಿಕ್ಷಣ ಅತ್ಯಗತ್ಯ ಎಂದರು.

ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು. ಕುಂಬಾರ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X