ದುಬೈನಲ್ಲಿ ಸಿಲುಕಿದ ಡಾ.ಪುಷ್ಪಾ ಅಮರನಾಥ್

ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ.
ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ ನಡೆದ ಯುದ್ಧದ ಹಿನ್ನೆಲೆಯಲ್ಲಿ ಭಾರತಕ್ಕೆ ವಾಪಸ್ ಬರಲಾಗದೆ ಅಲ್ಲೇ ವಾಸ್ತವ್ಯ ಹೂಡಿದ್ದಾರೆ.
ಈ ಸಂಬಂಧ ವೀಡಿಯೊ ಸಂದೇಶ ಕಳುಹಿಸಿರುವ ಅವರು, ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿಮಾನ ಹಾರಾಟಗಳು ಸ್ಥಗಿತಗೊಂಡಿದೆ. ನಾವು ಬರಬೇಕಿದ್ದ ವಿಮಾನ ರದ್ದಾಗಿದೆ. ಹಾಗಾಗಿ ನಾವುಗಳು ದುಬೈನಲ್ಲೇ ಉಳಿದುಕೊಳ್ಳಬೇಕಿದೆ. ಇಲ್ಲಿ ನಮಗೆ ಯಾವುದೇ ತೊಂದರೆ ಇಲ್ಲ. ಹೋಟೆಲ್‌ನಲ್ಲಿ ತಂಗಲು ಆಯೋಜಕರು ವ್ಯವಸ್ಥೆ ಮಾಡಿದ್ದಾರೆ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ನಾಳೆ ಅಥವಾ ನಾಡಿದ್ದು ವಿಮಾನಗಳ ಹಾರಾಟ ಪ್ರಾರಂಭವಾಗಬಹುದು ಎಂದು ಹೇಳಲಾಗುತ್ತಿದೆ. ನಾವು ಸುರಕ್ಷಿತವಾಗಿ ಭಾರತಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.
Next Story





