Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಅದಾನಿಯನ್ನು ತಕ್ಷಣವೇ ಬಂಧಿಸಿ,...

ಅದಾನಿಯನ್ನು ತಕ್ಷಣವೇ ಬಂಧಿಸಿ, ತಪ್ಪಿಸಿಕೊಳ್ಳಲು ಬಿಡಬೇಡಿ: ಸಿಎಂ ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Nov 2024 2:31 PM IST
share
Photo of Siddaramaiah

ಮೈಸೂರು,ನ.22: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದ್ದಾರೆ.

ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆಯಲ್ಲವೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಶೇ4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ಮಾಡಿದ್ದು ಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರು. ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಉಸಿರೇ ಬಿಡ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.‌

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಸುಳ್ಳೇ ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ. ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಜನರ ಬಳಿಗೆ ಹೋಗಿ ಆರ್.ಅಶೋಕ್ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X