ಪರಿಶೀಲಿಸಿ ನಕಲಿ ಬಿಪಿಎಲ್ ಕಾರ್ಡ್ ರದ್ದು : ಸಚಿವ ರಿಝ್ವಾನ್ ಅರ್ಷದ್

ಮೈಸೂರು : ಪರಿಶೀಲಿಸಿ ನಕಲಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಝ್ವಾನ್ ಅರ್ಷದ್ ಹೇಳಿದರು.
ಸಚಿವರಾದ ಬಳಿಕ ಪ್ರಥಮ ಬಾರಿಗೆ ಮೈಸೂರಿಗೆ ಆಗಮಿಸಿದ ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಈಗ ಅಧಿಕಾರ ವಹಿಸಿಕೊಂಡಿದ್ದೇನೆ. ಇಲಾಖೆಯಲ್ಲಿ ಹಲವು ಸಮಸ್ಯೆ ಇದೆ. ರಾಜ್ಯದ 4 ಕೋಟಿ ಜನ ನಮ್ಮ ಇಲಾಖೆಯ ಅಧೀನದಲ್ಲಿ ಬರುತ್ತಾರೆ. ಬಡವರಿಗೆ ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.
ಬಿಜೆಪಿಯವರು ಆಧಾರ ರಹಿತ ಪಾದಯಾತ್ರೆ ಮಾಡುತ್ತಿದ್ದಾರೆ. ತಪ್ಪು ಮಾಡಿರುವವರು ಜೈಲಿನಲ್ಲಿದ್ದಾರೆ. ಎಲ್ಲಾ ಹಣ ವಾಪಸ್ಸು ಬಂದಿದೆ. ಕೋಟ್ಯಾಂತರ ಹಣ ವರ್ಗಾವಣೆ ಅದರೆ ಅದಕ್ಕೆ ಕೇಂದ್ರ ಸರ್ಕಾರವು ಹೊಣೆ. ಹಾಗಾದರೆ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧವೂ ಪ್ರತಿಭಟನೆ ಮಾಡುತ್ತಾರಾ? ನಾಗೇಂದ್ರ ಸ್ವಯಂಪ್ರೇರಿತ ರಾಜೀನಾಮೆ ನೀಡಿದ್ದಾರೆ ಎಂದರು
Next Story




