ಮೈಸೂರು | ಚಾಮುಂಡಿ ಬೆಟ್ಟದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ: ಕಿಡಿಗೇಡಿಗಳ ಕೃತ್ಯ ಶಂಕೆ

ಮೈಸೂರು : ಬಿಸಲ ಬೇಗೆ ಹೆಚ್ಚಾಗುತ್ತಿರುವ ಸಮಯದಲ್ಲಿ ಚಾಮುಂಡಿ ಬೆಟ್ಟ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡು ಉರಿದ ಘಟನೆ ನಡೆದಿದೆ.
ಚಾಮುಂಡಿ ಬೆಟ್ಟದ ಅರಣ್ಯದಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡು ಅರಣ್ಯ ಹೊತ್ತಿ ಉರಿದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.
ಚಾಮುಂಡಿ ಬೆಟ್ಟದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಜ್ವಾಲೆ ವ್ಯಾಪಿಸಿಕೊಂಡು ದಟ್ಟ ಹೊಗೆಯೊಂದಿಗೆ ಆತಂಕ ಉಂಟು ಮಾಡಿತ್ತು. ತಕ್ಷಣ ಅರಣ್ಯ ಸಿಬ್ಬಂದಿಗಳು ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿದ್ದಾರೆ.
Next Story