Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ಹೊಸಮಠದ ಪೀಠಾಧ್ಯಕ್ಷ ಚಿದಾನಂದ...

ಮೈಸೂರು ಹೊಸಮಠದ ಪೀಠಾಧ್ಯಕ್ಷ ಚಿದಾನಂದ ಸ್ವಾಮೀಜಿ ನಿಧನ

ವಾರ್ತಾಭಾರತಿವಾರ್ತಾಭಾರತಿ13 Aug 2026 2:43 PM IST
share
ಮೈಸೂರು ಹೊಸಮಠದ ಪೀಠಾಧ್ಯಕ್ಷ ಚಿದಾನಂದ ಸ್ವಾಮೀಜಿ ನಿಧನ

ಮೈಸೂರು: ಹೊಸಮಠದ ಪೀಠಾಧ್ಯಕ್ಷರು ಹಾಗೂ ಬಸವತತ್ವದ ಪ್ರತಿಪಾದಕರಾಗಿದ್ದ ಚಿದಾನಂದ ಸ್ವಾಮೀಜಿ (76) ಅವರು ಗುರುವಾರ ಬೆಳಿಗ್ಗೆ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಿಗ್ಗೆ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಮಠದ ಸಮೀಪದ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಮೈಸೂರಿನ ಹೊಸಮಠವು ಸುಮಾರು 500 ವರ್ಷಗಳ ಇತಿಹಾಸ ಹಾಗೂ ಧಾರ್ಮಿಕ ಪರಂಪರೆಯನ್ನು ಹೊಂದಿದ್ದು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಮುಖ ವೀರಶೈವ–ಲಿಂಗಾಯತ ಮಠಗಳಲ್ಲಿ ಒಂದಾಗಿದೆ. ಬಸವತತ್ವದ ಪ್ರಸಾರ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಠವು ಮಹತ್ವದ ಕೊಡುಗೆ ನೀಡಿದೆ.

ಚಿದಾನಂದ ಸ್ವಾಮೀಜಿ ಅವರು ತಮ್ಮ ಗುರುಗಳಾದ ಗುರುಶಾಂತ ಸ್ವಾಮೀಜಿ ಅವರ ನಂತರ 1982ರಲ್ಲಿ ಹೊಸಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ‘ಶ್ರೀ ನಟರಾಜ ಪ್ರತಿಷ್ಠಾನ’ದ ಮೂಲಕ ಹಲವು ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆಗೆ ಶ್ರಮಿಸಿದ್ದರು. ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ವಿಶೇಷವಾಗಿ ಮಹಿಳೆಯರಿಗೆ ಉಚಿತ ವಸತಿ ಮತ್ತು ಶಿಕ್ಷಣ ಒದಗಿಸುವ ಕಾರ್ಯಕ್ಕೂ ಆದ್ಯತೆ ನೀಡಿದ್ದರು.

12ನೇ ಶತಮಾನದ ಶರಣರ ಸಿದ್ಧಾಂತಗಳ ಬಗ್ಗೆ ಅಪಾರ ನಂಬಿಕೆ ಹೊಂದಿದ್ದ ಅವರು ಬಸವಣ್ಣನವರ ಇತಿಹಾಸ ಹಾಗೂ ಬಸವತತ್ವದ ವಿಚಾರಗಳ ಪರವಾಗಿ ಧ್ವನಿ ಎತ್ತಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಚಳವಳಿಗೂ ಮಠದ ವತಿಯಿಂದ ಬೆಂಬಲ ನೀಡಿದ್ದರು.

ಚಿದಾನಂದ ಸ್ವಾಮೀಜಿ ಅವರ ನಿಧನದ ಸುದ್ದಿ ತಿಳಿದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಹೊಸಮಠಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಮಠದ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹೊಸಮಠದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Tags

mysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X