ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮೈಸೂರು,ಎ.21: ಮುಖ್ಯಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಮೈಸೂರಿನ ತಮ್ಮನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪ್ರವಾಸಕ್ಕೂ ತೆರಳಯವ ಮುನ್ನ ನಗರದ ಟಿ.ಕೆ.ಲೇಔಟ್ ನಲ್ಲಿರುವ ತಮ್ಮ ನಿವಾಸದ ಬಳಿ ಜಮಾಯಿಸಿದ್ದ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ನೀಡಿದರು.
ದೂರದ ಊರುಗಳಿಂದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಆಗಿಮಿಸಿದ್ದ ಸಾರ್ವಜನಿಕರಿಗೆ ನಿರಾಸೆಯುಂಟು ಮಾಡದೆ ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದರು. ನಿಮ್ಮ ಅಹವಾಲನ್ನು ಗಮನಿಸಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
Next Story




