Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕೋರ್ಟ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ...

ಕೋರ್ಟ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ : ಸಿಎಂ ಡಿ.ಕೆ.ಶಿವಕುಮಾರ್

►"ಮೊದಲ ಹಂತದಲ್ಲಿ 5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ" ► ಪಿರಿಯಾಪಟ್ಟಣದಲ್ಲಿ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Oct 2026 5:50 PM IST
share
ಕೋರ್ಟ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ : ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : “ಪ್ರಜಾಸೇವೆ ಇಲಾಖೆಯ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಇಡೀ ಸರ್ಕಾರ ನಿಮ್ಮ ಮುಂದಿದೆ. ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ಸೇವೆ ಒದಗಿಸಲು ಪ್ರಜಾಸೇವೆ ಅಭಿಯಾನದಲ್ಲಿ ಪ್ರತ್ಯೇಕ ಕಾನೂನು ಕೇಂದ್ರ ಆರಂಭಿಸಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಪಿರಿಯಾಪಟ್ಟಣದಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.

“ಪ್ರಜಾಸೇವೆ ಇಲಾಖೆ ಆರಂಭಿಸಿ ರಾಜ್ಯದ ಹಿರಿಯ ಪ್ರಮಾಣಿಕ ಅಧಿಕಾರಿಗೆ ಜವಾಬ್ದಾರಿ ವಹಿಸಿದ್ದೇವೆ. ಜನರ ಸೇವೆಗಾಗಿ ಜನರ ಸಮಸ್ಯೆಗೆ ಸ್ಪಂದಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಈ ಹೊಸ ಇಲಾಖೆ ಆರಂಭಿಸಿದ್ದೇನೆ. ನಾನು ಶಾಸಕನಾದ ಬಳಿಕ ಪ್ರತಿ ವರ್ಷ ಪ್ರತಿ ಹಳ್ಳಿಗೆ ತೆರಳಿ ಅನುಭವ ಪಡೆದಿದ್ದೇನೆ. ಜನರ ಸಮಸ್ಯೆಗಳಿಗೆ ಮುಕ್ತಿ ನೀಡಿ, ಅವರ ಆಶಯಗಳಿಗೆ ಧ್ವನಿಯಾಗಿ, ನ್ಯಾಯ ಒದಗಿಸಲು, ಮಂತ್ರಿಗಳು ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಸರ್ಕಾರವು ಅಧಿಕಾರಿಗಳ ಸಮೇತ ಜನರ ಮನೆ ಬಾಗಿಲಿಗೆ ಹೋಗಲು ಈ ಇಲಾಖೆ ಆರಂಭಿಸಲಾಗಿದೆ” ಎಂದರು.

620 ಕಡೆ ಪ್ರಜಾಸೇವೆ ಅಭಿಯಾನ

“ಸೆ.05ರಂದು ಈ ಇಲಾಖೆ ಆರಂಭಿಸಲಾಗಿದೆ. ಈಗಾಗಲೇ 620 ಕಡೆ ಪ್ರಜಾಸೇವೆ ಅಭಿಯಾನ ಆಯೋಜಿಸಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದು, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಬರುತ್ತಿವೆ. ಪ್ರತಿ ತಾಲ್ಲೂಕಿನಲ್ಲಿ ನ್ಯಾಯಾಲಯದಲ್ಲಿ ಕಾನೂನು ನೆರವು ನೀಡುವ ವಿಭಾಗವಿದ್ದು, ಅವರನ್ನು ಕರೆಸಿ ಈ ಕಾರ್ಯಕ್ರಮದಲ್ಲಿ ಒಂದು ಕೇಂದ್ರ ಆರಂಭಿಸಲಾಗಿದೆ. ಜನರಿಗೆ ಕಾನೂನಿನಲ್ಲಿ ತೊಡಕು ಇದ್ದರೆ ಉಚಿತವಾಗಿ ಸಹಾಯ ಮಾಡಲಾಗುವುದು. ಪ್ರಜಾಸೇವೆ ಇಲಾಖೆ ನಡೆಯುವಾಗ ಈ ವಿಭಾಗದವರು ಅಧಿಕಾರಿಗಳೊಂದಿಗೆ ಕೂತಿರುತ್ತಾರೆ. ಇಡೀ ದೇಶದಲ್ಲೇ ಬೇರೆ ಯಾವುದೇ ರಾಜ್ಯಗಳು ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ” ಎಂದರು.

12 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ

“ಯಾರು ಯಾವ ಅರ್ಜಿ ಕೊಟ್ಟಿದ್ದಾರೆ ಅವರಿಗೆ ನನ್ನ ಪರವಾಗಿ ಉತ್ತರ ಬರುತ್ತದೆ. ಪ್ರತಿ ಇಲಾಖೆ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಪ್ರತಿ ಇಲಾಖೆಯಲ್ಲಿ ಎಷ್ಟು ಅರ್ಜಿ ವಿಲೇವಾರಿ ಆಗಿದೆ ಎಂದು ನಾನು ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ಅರ್ಜಿ ವಿಲೇವಾರಿ ಆಗದೇ ಇದ್ದರೆ, ಯಾಕೆ ಆಗಲಿಲ್ಲ ಎಂದು ವಿವರಣೆ ನೀಡಿ, ಅದಕ್ಕೆ ಪರಿಹಾರ ತಿಳಿಸಲಾಗುವುದು. ನನಗೆ ಆರಂಭದಲ್ಲಿ ಪಿಂಚಣಿ ವಿಚಾರವಾಗಿ ಹೆಚ್ಚಿನ ಅರ್ಜಿಗಳು ಬರುತ್ತಿದ್ದವು. 32,000 ಆದಾಯ ಮಿತಿಯನ್ನು ನಿಗದಿ ಮಾಡಿದ್ದು, ಪಿಂಚಣಿ ನಿಂತಿದೆ ಎಂದಾಗ, ಅದಕ್ಕೆ 1.20 ಲಕ್ಷದವರೆಗೆ ಆದಾಯ ಮಿತಿಯನ್ನು ನಿಗದಿ ಮಾಡಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಸರ್ಕಾರದ ಒಂದು ತೀರ್ಮಾನದಿಂದ 12 ಲಕ್ಷ ಜನರಿಗೆ ಪ್ರಯೋಜನವಾಗಿದೆ” ಎಂದರು.

ಮೊದಲ ಹಂತದಲ್ಲಿ 5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ

“ನಿವೇಶನರಹಿತರು ಅರ್ಜಿಗಳನ್ನು ನೀಡುತ್ತಿದ್ದು, ಜಿಲ್ಲಾಧಿಕಾರಿಗಳು ಸರ್ಕಾರಿ ಜಮೀನುಗಳನ್ನು ಗುರುತಿಸಬೇಕು. ಅದಿಲ್ಲದಿದ್ದರೆ ಖಾಸಗಿ ಜಮೀನು ಅಥವಾ ಹೊಸ ಬಡಾವಣೆಗಳನ್ನು ನಿರ್ಮಾಣ ಮಾಡಿ ಎಂದು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ಸೂರು ಕೊಡಬೇಕೆಂದು 5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ ಮಾಡಲಾಗಿದೆ” ಎಂದರು.

ಬರಗಾಲ ಎದುರಿಸಲು ಸಿದ್ಧ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, 217 ತಾಲ್ಲೂಕುಗಳು ಬರಗಾಲ ಪೀಡಿತವಾಗಿವೆ. ಟ್ರ್ಯಾಕ್ಟರ್ ಗಳಿಗೆ ಸಹಾಯಧನ, ನೇಗಿಲಯೋಗಿ ಯೋಜನೆಗೆ 2 ತಾಲ್ಲೂಕು ಆಯ್ಕೆ ಮಾಡಿ ಹೊಲ ಉಳುಮೆ ಮಾಡಿಕೊಡಲು ಕೃಷಿ ಸಚಿವ ನರೇಂದ್ರಸ್ವಾಮಿಯವರಿಗೆ ಸೂಚನೆ ನೀಡಿರುವುದಾಗಿ" ತಿಳಿಸಿದರು.

ಪ್ರತಿಭೆಗೆ ಪ್ರೋತ್ಸಾಹ

"ನಮ್ಮ ದೇಶದ ಯುವಕರು ಸಹಬಾಳ್ವೆಯಿಂದಿರಲು ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಯುವಕರಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ನಿಟ್ಟಿನಲ್ಲಿ ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ಅನುದಾನ ನೀಡಲಾಗುತ್ತಿದೆ. 16-35 ವರ್ಷದೊಳಗಿನ ಯುವಕರು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಇವರಿಗೆ ಒಬ್ಬ ಮಾರ್ಗದರ್ಶಕರೊಬ್ಬರನ್ನು ನೇಮಿಸಲಾಗುವುದು.

ಇಂದು ಬೆಳಿಗ್ಗೆಯಷ್ಟೇ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಪೂವಮ್ಮ ಅವರನ್ನು ಅಭಿನಂದಿಸಿದ್ದೇನೆ. ರಾಜ್ಯದ ಪ್ರತಿಭೆಗಳನ್ನು ಪ್ರೋತ್ಸಾಹಿಸಲಾಗುವುದು" ಎಂದರು

“ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ದುರುಪಯೋಗವಾಗುತ್ತಿರುವ ಬಗ್ಗೆ ವರದಿಗಳು ಬಂದ ಹಿನ್ನೆಲೆಯಲ್ಲಿ ಮರುಪರಿಶೀಲನೆ ಕೈಗೊಳ್ಳಲಾಯಿತು ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X