Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಖಾಸಗಿ ಫ್ಲೆಕ್ಸ್ ಗಳಿಗೆ ಅವಕಾಶವಿಲ್ಲ,...

ಖಾಸಗಿ ಫ್ಲೆಕ್ಸ್ ಗಳಿಗೆ ಅವಕಾಶವಿಲ್ಲ, ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು : ಸಿಎಂ ಡಿ.ಕೆ.ಶಿವಕುಮಾರ್

► "ಏಷ್ಯನ್ ಗೇಮ್ಸ್ ನಲ್ಲಿ ಪದಕ‌ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳಿಗೆ ದಸರಾ ಕ್ರೀಡಾಕೂಟದಲ್ಲಿ ಗೌರವ" ► ದಸರಾ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ3 Oct 2026 10:30 PM IST
share
ಖಾಸಗಿ ಫ್ಲೆಕ್ಸ್ ಗಳಿಗೆ ಅವಕಾಶವಿಲ್ಲ, ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು : ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : "ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಯಬೇಕು. ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲು ಧನಂಜಯ, ಏಕಲವ್ಯ ಸೇರಿ ಐದು ಆನೆಗಳಿಗೆ ತರಬೇತಿ ನೀಡಲಾಗಿದೆ. ಇನ್ನೂ ಹೆಚ್ಚಿನ ತರಬೇತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಶನಿವಾರ ಮಾತನಾಡಿದರು.

"ರಾಜ ವಂಶಸ್ಥರಿಗೂ ಗೌರವ ಪೂರ್ವಕ ಆಹ್ವಾನ ನೀಡಬೇಕು. ಯಾರ ಸ್ಥಾನ, ಸ್ವಾಭಿಮಾನಕ್ಕೂ ಧಕ್ಕೆ ತರುವ ಕೆಲಸ ಆಗಬಾರದು. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಇಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಸಲು ಸೂಚಿಸಲಾಗಿದೆ" ಎಂದರು.

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಗೌರವ

ಏಷ್ಯನ್ ಗೇಮ್ ನಲ್ಲಿ ಪದಕ‌ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳನ್ನು ದಸರಾ ಕ್ರೀಡಾಕೂಟಕ್ಕೆ ಆಹ್ವಾನಿಸಿ ಗೌರವ ನೀಡಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಸಚಿವರಿಗೂ ಹೊಣೆ

"ದಸರಾ‌ ಹನ್ನೊಂದು ದಿನವೂ ದಿನಕ್ಕೆ ಇಬ್ಬರು ಸಚಿವರಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೆಂಬಲವಾಗಿ ಕೆಲಸ ಮಾಡಬೇಕು. ಏಕೆಂದರೆ ಒಬ್ಬರ ಮೇಲೆಯೇ ಒತ್ತಡ ಹೆಚ್ಚುವುದನ್ನು ತಪ್ಪಿಸಬೇಕು ಎನ್ನುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲರ ಸಲಹೆಯಂತೆ ದಸರಾ ಕಾರ್ಯಕ್ರಮ ನಡೆಸಬೇಕು" ಎಂದು ಸೂಚನೆ ನೀಡಿದರು.

ನನ್ನ ಫೋಟೊ ಸೇರಿದಂತೆ ಯಾವ ಫೋಟೊಗಳನ್ನೂ ಹಾಕಬಾರದು

"ನಗರದಲ್ಲಿ ಎಲ್ಲಿಯೂ ಖಾಸಗಿ ಪ್ಲೆಕ್ಸ್ ಗಳಿಗೆ ಅವಕಾಶ ನೀಡಬಾರದು. ನನ್ನ ಫೋಟೊ ಸೇರಿದಂತೆ ಯಾವ ಫೋಟೊಗಳನ್ನೂ ಹಾಕಬಾರದು. ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು. ದಸರಾ ಸೌಂದರ್ಯವನ್ನು ಯಾವ ಕಾರಣಕ್ಕೂ ಹಾಳುಗೆಡವಬಾರದು" ಎಂದು ಸೂಚಿಸಿದರು.

21 ದಿನಗಳ ಕಾಲ ದೀಪಾಲಂಕಾರ

"ಈ ವರ್ಷ ದೀಪಾಲಂಕಾರವನ್ನು ವಿಶೇಷವಾಗಿ ಆಯೋಜನೆ ಮಾಡಲಾಗುವುದು. 21 ದಿನಗಳ ಕಾಲ ಇದು ನಡೆಯಲಿದೆ. ಯುವದಸರಾ ಕಂಬಳ ಸೇರಿದಂತೆ ಇತರೆಡೆ ಆಹಾರ ಮೇಳ ಆಯೋಜನೆ ಮಾಡಬೇಕು.‌ ಅಲ್ಲಲ್ಲಿ ಶೌಚಾಲಯ, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಈ ಬಾರಿ ಯುವ ದಸರಾದಲ್ಲಿ ಎರಡು ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ" ಎಂದರು.

ಪ್ರವಾಸಿಗರಿಂದ ಸುಲಿಗೆ ಮಾಡಬಾರದು

ಹೋಟೆಲ್ ಗಳು ಯಾವುದೇ ಕಾರಣಕ್ಕೂ ಪ್ರವಾಸಿಗರಿಂದ ಸುಲಿಗೆ ಮಾಡಬಾರದು. ಗೌರವಯುತ ಮೊತ್ತ ಪಡೆಯಬೇಕು ಎಂದು ಸೂಚಿಸಲಾಗಿದೆ.

ಜಂಬೂ ಸವಾರಿ: ಆಸನಗಳಿಗೆ ನಂಬರ್ ಹಾಗೂ ಹೆಸರು

ದೇಶ- ವಿದೇಶಗಳ ರಾಯಬಾರಿಗಳಿಗೆ ಆಹ್ವಾನ ನೀಡಲಾಗಿದೆ. ಅವರಿಗೂ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುವುದು. ಹಣ ಕೊಟ್ಟು ಜಂಬೂ ಸವಾರಿ ವೀಕ್ಷಣೆ ಮಾಡುವವರಿಗೆ ಸೂಕ್ತ ಆಸನ ವ್ಯವಸ್ಥೆ, ಆಸನಗಳಿಗೆ ನಂಬರ್ ಹಾಗೂ ಹೆಸರು ಹಾಕಬೇಕು. ಯಾರೋ ಬಂದು ಕೂರಬಾರದು. ಜೊತೆಗೆ ಎಷ್ಟು ಗಂಟೆಗೆ ಒಳಗೆ ಬರಬೇಕು ಎಂಬುದನ್ನೂ ತಿಳಿಸಬೇಕು ಎಂದು ಸೂಚಿಸಿದರು.

ವೈವಿಧ್ಯಮಯ ಕಲಾ ತಂಡಗಳಿಗೆ ಅವಕಾಶ

ದಸರಾ ಮೆರವಣಿಗೆ ಹೋಗುವಾಗ ಒಂದೇ ರೀತಿಯ ತಂಡಗಳಿಗೆ ಅವಕಾಶ ನೀಡಬಾರದು. ವೈವಿಧ್ಯಮಯ ಕಲಾ ತಂಡಗಳಿಗೆ ಅವಕಾಶ ನೀಡಬೇಕು. ಟ್ಯಾಬ್ಲೋಗಳೂ ಸಹ ಶಿಸ್ತು ಕಾಪಾಡಬೇಕು ಎಂದರು.

"ಭಾನುವಾರ ಗವಿಸಿದ್ದೇಶ್ವರ‌ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲು ಜಿಲ್ಲಾಡಳಿತ ತೆರಳಲಿದೆ. ಜಾತಿ, ಧರ್ಮ ಬೇಧವಿಲ್ಲದೆ ಎಲ್ಲ ಮಠಾಧೀಶರು, ಕ್ರೈಸ್ತ, ಬೌದ್ಧ, ಸಿಖ್, ಅಲ್ಪಸಂಖ್ಯಾತರು ಮತ್ತಿತರ ಧರ್ಮಗಳ ಗುರುಗಳನ್ನು ಆಹ್ವಾನಿಸಲು ಸೂಚಿಸಲಾಗಿದೆ. ಧಾರ್ಮಿಕ ಪ್ರಮುಖರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು" ಎಂದರು.

ಟಿಬೆಟಿಯನ್ನರ ಸ್ತಬ್ಧಚಿತ್ರಕ್ಕೆ ಅವಕಾಶ

"ಟಿಬೆಟಿಯನ್ನರಿಗೂ ದಸರಾ ಮೆರವಣಿಗೆಯಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಂಗಳೂರಿನ ಇತಿಹಾಸ ಬಿಂಬಿಸುವ ಟ್ಯಾಬ್ಲೋ, ಕೇರಳ,‌ ತಮಿಳುನಾಡು ಹಾಗೂ ಆಂದ್ರಪ್ರದೇಶದವರಿಗೂ ಅವರ ಪರಂಪರೆ ಬಿಂಬಿಸುವ ಟ್ಯಾಬ್ಲೋಗಳನ್ನು ಕಳುಹಿಸಿ ಎಂದು ಪತ್ರ ಬರೆಯಲಾಗಿದೆ. ಜೊತೆಗೆ ಚಿತ್ರರಂಗದವರೂ ಸಹ ಈ ಬಾರಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಜಯಮಾಲ ಅವರೊಟ್ಟಿಗೆ ಈ ಬಗ್ಗೆ ಸಂವಹನ ನಡೆಸಲಾಗಿದೆ" ಎಂದರು.

ತುಳುನಾಡಿನ ಪ್ರತ್ಯೇಕ ಸ್ತಬ್ಧಚಿತ್ರ

"ತುಳುನಾಡಿಗೆ ಸುದೀರ್ಘ ಇತಿಹಾಸವಿದೆ. ಅವರ ಭಾವನಾತ್ಮಕ ವಿಚಾರಕ್ಕೆ ಗೌರವ ಸಲ್ಲಿಸಿದ್ದು, ಅವರ ಸಂಸ್ಕೃತಿ ಬಿಂಬಿಸಲು ಪ್ರತ್ಯೇಕ ಸ್ತಬ್ಧಚಿತ್ರ ಸಿದ್ಧಪಡಿಸಲು ಆಹ್ವಾನಿಸಲಾಗಿದೆ" ಎಂದರು ಸೂಚಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X