Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ಸರ್ವ ಕಲೆಗಳ ತವರು ಹಾಗೂ...

ಮೈಸೂರು ಸರ್ವ ಕಲೆಗಳ ತವರು ಹಾಗೂ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ : ಸಿಎಂ ಡಿ.ಕೆ.ಶಿವಕುಮಾರ್

ಡಾ.ಮೈಸೂರು ನಾಗಮಣಿ ಶ್ರೀನಾಥ್ ಅವರಿಗೆ 'ಸಂಗೀತ ವಿದ್ವಾನ್' ಪ್ರಶಸ್ತಿ ಪ್ರಧಾನ

ವಾರ್ತಾಭಾರತಿವಾರ್ತಾಭಾರತಿ11 Oct 2026 9:52 PM IST
share
ಮೈಸೂರು ಸರ್ವ ಕಲೆಗಳ ತವರು ಹಾಗೂ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ : ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : ರಾಜ್ಯದ ಸಾಂಸ್ಕೃತಿಕ ಪರಂಪರೆ, ಕಲೆ, ಸಾಹಿತ್ಯ ಹಾಗೂ ಕನ್ನಡ ನಾಡಿನ ವೈಭವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮೈಸೂರಿನ ಅರಮನೆ ಆವರಣದಲ್ಲಿ ರವಿವಾರ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

"ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಯಿಂದ ಸಮಾನತೆ ಹಾಗೂ ಸಮಾನತೆಯಿಂದ ಶಾಂತಿ" ಎಂಬುದು ನಮ್ಮ ಸರಕಾರದ ಮೂಲ ತತ್ವವಾಗಿದೆ ಎಂದು ಹೇಳಿದರು.

ಮೈಸೂರು ಸರ್ವ ಕಲೆಗಳ ತವರು ಹಾಗೂ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾಗಿದೆ. ದೇಶ-ವಿದೇಶಗಳ ಕಲಾವಿದರಿಗೆ ಪ್ರೋತ್ಸಾಹ ನೀಡುವ ಪ್ರಮುಖ ತಾಣವಾಗಿ ಮೈಸೂರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುವುದು ಎಂದರು.

ಹಿರಿಯ ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಸಾಹಿತಿ ಡಾ. ಮೈಸೂರು ನಾಗಮಣಿ ಶ್ರೀನಾಥ್ ಅವರಿಗೆ 'ಸಂಗೀತ ವಿದ್ವಾನ್' ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜನರ ಕಷ್ಟಗಳನ್ನು ಆಲಿಸಲು, ಮನೆಬಾಗಿಲಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಹಾಗೂ ಅವರ ಅಹವಾಲು ಬಗೆಹರಿಸಲು 'ಪ್ರಜಾ ಸೇವಾ ಇಲಾಖೆ'ಯನ್ನು ರೂಪಿಸಲಾಗಿದ್ದು, ಸದ್ಯದಲ್ಲೇ ತಾವು ಮೈಸೂರು ನಗರಕ್ಕೆ ಆಗಮಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವುದಾಗಿ ಭರವಸೆ ನೀಡಿದರು.

1902ರಲ್ಲೇ ಶಿವನಸಮುದ್ರದಿಂದ ಮೈಸೂರು ಅರಮನೆಗೆ ಹಾಗೂ ಕೆ.ಜಿ.ಎಫ್.ಗೆ ವಿದ್ಯುತ್ ಹರಿದು ಬಂದ ಇತಿಹಾಸವನ್ನು ಸ್ಮರಿಸಿದ ಅವರು, ದಸರಾ ಸಂದರ್ಭದಲ್ಲಿ ಬೆಳಗಿದ ಈ ಜ್ಯೋತಿ ಇಡೀ ರಾಜ್ಯಕ್ಕೆ ಬೆಳಕು ನೀಡಲಿ ಎಂದು ಹಾರೈಸಿದರು.

ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಮೈಸೂರಿನ ರೇಷ್ಮೆ, ಶ್ರೀಗಂಧ ಹಾಗೂ ಸಾಂಪ್ರದಾಯಿಕ ಚಿತ್ರಕಲೆಯ ವೈಭವವನ್ನು ಕೊಂಡಾಡಿದರು.

ಇದೇ ವೇಳೆ, ಈ ಬಾರಿಯ ದಸರಾ ಉತ್ಸವದಲ್ಲಿ ಭಾರತೀಯ ರಕ್ಷಣಾ ಪಡೆಯ ಮೂರು ವಿಭಾಗಗಳ ಟ್ಯಾಬ್ಲೋ ಮತ್ತು ಏರ್ ಶೋ ಪ್ರದರ್ಶನಕ್ಕೆ ಮನವಿ ಮಾಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವರು ಇದಕ್ಕೆ ಸಮ್ಮತಿಸಿದ್ದಾರೆ ಎಂದು ಮಾಹಿತಿ ನೀಡಿದರು. ಜೊತೆಗೆ ಕನ್ನಡ ಚಿತ್ರಮಂಡಳಿ ಹಾಗೂ ಬೈಲುಕುಪ್ಪೆಯ ಬೌದ್ಧ ಸಂಸ್ಕೃತಿಯ ಪ್ರದರ್ಶನಗಳೂ ದಸರಾ ಮೆರವಣಿಗೆಯ ವೈಭವವನ್ನು ಹೆಚ್ಚಿಸಲಿವೆ ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X