Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ...

ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ʼಅನ್ನಭಾಗ್ಯʼ ಯೋಜನೆ ಜಾರಿಗೆ ತರಲು ಕಾರಣ : ಸಿದ್ದರಾಮಯ್ಯ

"ಗ್ಯಾರಂಟಿ ಯೋಜನೆಗಳು : ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Sept 2024 7:37 PM IST
share
ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ʼಅನ್ನಭಾಗ್ಯʼ ಯೋಜನೆ ಜಾರಿಗೆ ತರಲು ಕಾರಣ : ಸಿದ್ದರಾಮಯ್ಯ

ಮೈಸೂರು : "ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ʼಅನ್ನಭಾಗ್ಯʼ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ʼ1949 ನ.25ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆʼ ಎಂದು ಹೇಳಿದರು.

"ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡುತ್ತಿದ್ದರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡುತ್ತಿದ್ದರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದೆ" ಎಂದು ತಿಳಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18ರವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತನಾಡಬೇಕು ಎಂದರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ನಾಟಕಕಾರ ಕೆ.ವೈ.ನಾರಾಯಣಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ.

-ಕೆ.ವೈ.ನಾರಾಯಣಸ್ವಾಮಿ, ನಾಟಕಕಾರ.

2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು.

-ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X