Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ...

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Nov 2025 10:48 PM IST
share
ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು : ಸಿಎಂ ಸಿದ್ದರಾಮಯ್ಯ
ʼದೇವರಾಜು ಅರಸು, ಹಾವನೂರು ಪ್ರಶಸ್ತಿʼ ಪ್ರದಾನ

ಮೈಸೂರು : ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, ಸರ್ಕಾರ ಹಿಂದುಳಿದ ವರ್ಗದ ಮಕ್ಕಳು, ಬಡವರ ಮಕ್ಕಳು ವಿದ್ಯಾವಂತರಾಬೇಕೆಂಬ ಉದ್ದೇಶದಿಂದ ಹಾಸ್ಟೆಲ್ಗಳನ್ನು ತೆರೆದು, ಪ್ರವೇಶ ನೀಡಿ ಓದಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇಲ್ಲಿ ಓದಿದವರು ಉನ್ನತ ಹುದ್ದೆಗೆ ಏರಿದ್ದಾರೆ, ಕೆಲವರು ಇತರೆ ಉದ್ಯೋಗ ಮಾಡುತ್ತಿದ್ದಾರೆ. ಶಿಕ್ಷಣ ಬಹಳ ಮುಖ್ಯ. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಶಿಕ್ಷಣದ ಪ್ರಮಾಣ ಶೇ 10-12% ಮಾತ್ರವಿತ್ತು ಇಂದು ಶೇ 78% ರಷ್ಟು ಏರಿದೆ ಎಂದರು. ಶಿಕ್ಷಣದ ಪ್ರಮಾಣ ಶೇ 100 ರಷ್ಟು ಆಗಬೇಕಿದೆ ಎಂದರು.

ಎಲ್ಲರನ್ನೂ ಸಮಾನರಾಗಿ ಕಾಣಬೇಕು

ಜಾತಿ, ವರ್ಗ ರಹಿತ ವ್ಯವಸ್ಥೆ ನಿರ್ಮಾಣ, ಮೂಢನಂಬಿಕೆ ತೊಲಗಬೇಕು ಎಂದು 850 ವರ್ಷಗಳ ಹಿಂದೆಯೇ ಬಸವಣ್ಣ ಹೇಳಿದ್ದರು. ನಾವು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಬಹಳ ಮುಖ್ಯ. ನಮ್ಮ ದೇಶದಲ್ಲಿ ಅನೇಕ ಧರ್ಮ ಮತ್ತು ಜಾತಿಗಳಿವೆ. ಎಲ್ಲ ಧರ್ಮಗಳೂ ಪರಸ್ಪರರನ್ನು ಪ್ರೀತಿಸಬೇಕು ಎಂದು ಹೇಳುತ್ತದೆಯೇ ಹೊರತು ಪರಸ್ಪರರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ. ಎಲ್ಲರನ್ನೂ ಸಮಾನರಾಗಿ ಕಾಣಬೇಕು. ಕನಿಷ್ಠ ಪಕ್ಷ ವಿದ್ಯಾವಂತರಾದರೂ ಇದನ್ನು ಪಾಲಿಸಬೇಕು ಎಂದರು.

ಸಹಬಾಳ್ವೆ, ಪರಧರ್ಮ ಸಹಿಷ್ಣುತೆರಬೇಕು ಎಂದು ಸಂವಿಧಾನ ಹೇಳುತ್ತದೆ. ಇದು ಇದ್ದರೆ ದ್ವೇಷಿಸುವ ಪ್ರಮೇಯ ಇರುವುದಿಲ್ಲ. ಸತ್ಯ ತಿಳಿದೂ ಅಸತ್ಯವನ್ನೇ ಅಭ್ಯಾಸ ಮಾಡಿಕೊಳ್ಳಬಾರದು. ಹಿಂದೆ ಒಮ್ಮೆ ನನ್ನ ಕಾರಿನ ಮೇಲೆ ಕಾಗೆ ಕೂತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ. ಈ ಬಾರಿ ಬಜೆಟ್ ಮಂಡಿಸುವುದಿಲ್ಲ ಎಂದೆಲ್ಲಾ ಟಿವಿ ವಾಹಿನಿಗಳಲ್ಲಿ ಹೇಳಿದ್ದರು. ಕಾಗೆ ಕೂತಿದ್ದು ಅನಿಷ್ಟ ಎಂದರು. ಇದಾದ ನಂತರ ಬಜೆಟ್ ಮಂಡಿಸಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದೇನೆ. ಈ ಬಾರಿ ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷಗಳಾಯಿತು ಎಂದರು.

ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನ ಬೆಳೆಸಿಕೊಳ್ಳಬೇಕು :

ರಾಜ್ಯದಲ್ಲಿ 3,88,000 ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ವಿದ್ಯೆ ಪಡೆಯುತ್ತಿದ್ದಾರೆ. ಈಗ ಮೈಸೂರು ನಗರದಲ್ಲಿ 6500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರುಹಿಂದುಳಿದ ವರ್ಗಗಳಿಗೆ ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಶಕ್ತಿ ತುಂಬಿದರು. ಆದ್ದರಿಂದ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಖ್ಯಾತರಾಗಿದ್ದರು. 2013 ರ ನಮ್ಮ ಅವಧಿಯಲ್ಲಿಯೂ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಬಾರಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಮಾಜದಲ್ಲಿನ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಹಿಂದುಳಿದವರು ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದು ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಕನ್ನಡದ ವಾತಾವರಣ ಸೃಷ್ಟಿಯಾಗಲಿ :

ಇಂದು ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲಾಗಿದೆ. ನಾವೆಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುತ್ತೇವೆ ಎಂಬ ಶಪಥ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ಕನ್ನಡ ಮಾತನಾಡುವುದು ವಿರಳವಾಗುತ್ತಿದೆ. ಆದ್ದರಿಂದ ಕನ್ನಡದ ವಾತಾವರಣ ಸೃಷ್ಟಿಸಿ, ಕನ್ನಡ ಕಲಿಕೆ ಎಂಬುದು ಅನಿವಾರ್ಯವಾಗುತ್ತದೆ. ಬ್ಯಾಂಕುಗಳೂ ಸೇರಿದಂತ ಸಾರ್ವಜನಿಕ ಸಂಸ್ಥೆಗಳು, ಜನರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಕರ್ನಾಟಕದ ಏಕೀಕರಣಕ್ಕಾಗಿ ಅನೇಕ ಮಹನೀಯರು ಕೊಡುಗೆ ನೀಡಿದ್ದು, ಕನ್ನಡ ರಾಜ್ಯೋತ್ಸವದಂದು ಅವರನ್ನು ಸ್ಮರಿಸಿಕೊಳ್ಳಬೇಕು. ಕನ್ನಡವನ್ನು ಮಾತನಾಡುವ ಜೊತೆಗೆ ಬೇರೆ ಭಾಷೆಯನ್ನು ಕಲಿಯಬಹುದಾದರೂ, ನಾವೆಲ್ಲರೂ ಕನ್ನಡಿಗರಾಗಿರಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X