ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬೆನ್ನಲ್ಲೇ, ʼಪೂರ್ಣಾವಧಿ ಸಿಎಂʼ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ

ಸಿದ್ದರಾಮಯ್ಯ
ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದ ಸಿಎಂ
ಮೈಸೂರು : ʼಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ʼಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆʼ ಎಂದರು.
ದಾಖಲೆ ಕಾಕತಾಳೀಯ :
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
Next Story





