Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ...

ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ ನಾನು ರಾಜಕಾರಣ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 April 2026 9:22 PM IST
share
ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ ನಾನು ರಾಜಕಾರಣ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

ಮೈಸೂರು/ಹುಣಸೂರು: ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ ನಾನು ರಾಜಕಾರಣ ಮಾಡುತ್ತೇನೆ. ನನ್ನ ಇಡೀ ರಾಜಕೀಯ ಜೀವನದ 42 ವರ್ಷಗಳಿಂದಲೂ ಜನರು ಬೆಂಬಲಿಸುತ್ತಾ ಬಂದಿದ್ದಾರೆ ಎಂದರು.

2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ :

ನಮ್ಮ ಸರಕಾರ ಜನಪರವಾದ ಕೆಲಸ ಮಾಡಿದ್ದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕಾದರೆ ಬಸವಣ್ಣ, ಅಂಬೇಡ್ಕರ್, ಗಾಂಧೀಜಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣವಾಗಬೇಕೆನ್ನುವುದು ನಮ್ಮ ಸರಕಾರದ ಉದ್ದೇಶ. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮೌಢ್ಯಗಳಿಂದ ದೂರವಿದ್ದು, ಜಾತಿ, ವರ್ಗಗಳನ್ನು ಬಿಟ್ಟಾಗ ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಬಸವಣ್ಣನವರು ಸಮಾಜದ ಜಾತಿವ್ಯವಸ್ಥೆ ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು. ಮೌಢ್ಯಗಳಿಂದ ದೂರವಿರುವ, ಜಾತಿ ಮತ್ತು ವರ್ಗರಹಿತ ಸಮಾಜ ನಿರ್ಮಾಣವನ್ನು ಅವರು ಬಯಸಿದ್ದರು. ಬಸವಣ್ಣನವರು ಮೇಲ್ಜಾತಿಗೆ ಸೇರಿದವರಾದರೂ, ಸಮಾಜದ ಕಟ್ಟಕಡೆಯ ಅಸ್ಪೃಶ್ಯತೆಯ ಜಾತಿಯಲ್ಲಿ ಹುಟ್ಟಿದವನು ಎಂದು ಹೇಳಿಕೊಳ್ಳುತ್ತಿದ್ದರು. ಬಸವಾದಿ ಶರಣರು ಸಮಾಜ ಪರಿವರ್ತನೆಗೆ ಪೂರ್ಣ ಪ್ರಮಾಣದಲ್ಲಿ ಸಫಲರಾಗಲಿಲ್ಲ. ಬಸವ ವಿಚಾರಗಳು ಹಿಂದೆಯೂ, ಇಂದಿಗೂ, ಭವಿಷ್ಯದಲ್ಲಿಯೂ ಪ್ರಸ್ತುತವಾಗಿದೆ. ಮನುಷ್ಯ ಸಮಾಜ ನಿರ್ಮಾಣ ಮಾಡಲು ಬಯಸಿದ ಬಸವಣ್ಣನವರು ಒಬ್ಬ ಮಾನವತಾವಾದಿ ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ, ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

CM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X