Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಹಸಿರು ಪರಿಸರ ನಿರ್ಮಾಣಕ್ಕೆ ಸಾಮೂಹಿಕ...

ಹಸಿರು ಪರಿಸರ ನಿರ್ಮಾಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮಿಯಾವಾಕಿ ಮಾದರಿಯಲ್ಲಿ ‘ಭಾರತ ವನ’ ಯೋಜನೆ; ಸಸಿ ನೆಡುವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Nov 2026 3:17 PM IST
share
ಹಸಿರು ಪರಿಸರ ನಿರ್ಮಾಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯ ಕೆಲಸವಲ್ಲ, ಅದು ಮುಂದಿನ ಪೀಳಿಗೆಯ ಭವಿಷ್ಯವನ್ನು ಸುರಕ್ಷಿತಗೊಳಿಸುವ ಮಹತ್ವದ ಜವಾಬ್ದಾರಿಯಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದ ಲಲಿತಾದ್ರಿಪುರದ ಸುತ್ತಮುತ್ತ ಕ್ಯಾಚ್ ಫೌಂಡೇಶನ್, ಎಸ್‌ಬಿಐ ಹಾಗೂ ಎಸ್‌ಬಿಐ ಫೌಂಡೇಶನ್‌ನ ಸಿಎಸ್‌ಆರ್ ಅನುದಾನದ ಸಹಯೋಗದಲ್ಲಿ ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಪಾನ್‌ನ ಪ್ರಸಿದ್ಧ ‘ಮಿಯಾವಾಕಿ’ ಮಾದರಿಯಲ್ಲಿ ‘ಭಾರತ ವನ’ ಯೋಜನೆಯಡಿ ಒಂದೇ ದಿನದಲ್ಲಿ 40 ಸಾವಿರ ಗಿಡಗಳನ್ನು ನೆಡಲಾಗುತ್ತಿದೆ. ಸ್ಥಳೀಯ ತಳಿಯ ಸಸ್ಯಗಳಿಗೆ ವಿಶೇಷ ಆದ್ಯತೆ ನೀಡಿರುವುದು ಈ ಯೋಜನೆಯ ಪ್ರಮುಖ ವೈಶಿಷ್ಟ್ಯವಾಗಿದೆ ಎಂದು ತಿಳಿಸಿದರು.

ಮಿಯಾವಾಕಿ ಮಾದರಿಯಲ್ಲಿ ರೂಪುಗೊಳ್ಳುತ್ತಿರುವ ಈ ನಗರ ಅರಣ್ಯವು ಮುಂದಿನ ದಿನಗಳಲ್ಲಿ ಮೈಸೂರಿನ ಹಸಿರು ಹೊದಿಕೆಯನ್ನು ಹೆಚ್ಚಿಸುವುದರ ಜೊತೆಗೆ ಪರಿಸರ ಸಮತೋಲನ ಕಾಪಾಡಲು ಸಹಕಾರಿಯಾಗಲಿದೆ. ಅಲ್ಲದೆ, ಹಕ್ಕಿ-ಪಕ್ಷಿಗಳು ಹಾಗೂ ವಿವಿಧ ಪ್ರಾಣಿ ಸಂಕುಲಗಳಿಗೆ ನೈಸರ್ಗಿಕ ಆವಾಸಸ್ಥಾನ ಕಲ್ಪಿಸಲಿದೆ ಎಂದರು.

ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಾಗೂ ತಾಯಂದಿರ ಹೆಸರಿನಲ್ಲಿ ಗಿಡಗಳನ್ನು ನೆಟ್ಟಿರುವುದು ಅತ್ಯಂತ ಸಂತಸದ ಸಂಗತಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮತ್ತು ಪ್ರಕೃತಿಯ ಮೇಲಿನ ಕಾಳಜಿಯನ್ನು ಬೆಳೆಸುವುದು ಇಂತಹ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಬೇಕು. ಸರ್ಕಾರ, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ಸುಸ್ಥಿರ ಮತ್ತು ಪರಿಸರಸ್ನೇಹಿ ನಗರಗಳನ್ನು ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮೈಸೂರಿನ ನೈಸರ್ಗಿಕ ಸೌಂದರ್ಯ ಮತ್ತು ಹಸಿರು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಸಾಮೂಹಿಕ ಪರಿಸರ ಅಭಿಯಾನಗಳು ಮಹತ್ವದ ಪಾತ್ರ ವಹಿಸಲಿವೆ. ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಅಮೂಲ್ಯ ಕೊಡುಗೆಯಾಗಿ ನೀಡುವ ಸಂಕಲ್ಪದೊಂದಿಗೆ ಮೈಸೂರನ್ನು ಇನ್ನಷ್ಟು ಹಸಿರು ಹಾಗೂ ಪರಿಸರಸ್ನೇಹಿ ನಗರವನ್ನಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಸಚಿವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಪರಿಸರವಾದಿ ಡಾ. ರಾಧಾಕೃಷ್ಣ ನಾಯರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್‌ಬಿಐ ಫೌಂಡೇಶನ್‌ನ ಪ್ರಧಾನ ಮುಖ್ಯ ವ್ಯವಸ್ಥಾಪಕ ದೀಪಕ್ ಕೌಶಿಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags

Dr.Yathindra SiddaramaiahEnvironment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X