Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru | ಎರಡನೇ ದಿನವೂ ಮುಂದುವರೆದ ದಸರಾ...

Mysuru | ಎರಡನೇ ದಿನವೂ ಮುಂದುವರೆದ ದಸರಾ ಗಜಪಡೆಗಳ ಬಾರ ಹೊರುವ ತಾಲೀಮು

ವಾರ್ತಾಭಾರತಿವಾರ್ತಾಭಾರತಿ8 Sept 2026 12:10 AM IST
share
Mysuru | ಎರಡನೇ ದಿನವೂ ಮುಂದುವರೆದ ದಸರಾ ಗಜಪಡೆಗಳ ಬಾರ ಹೊರುವ ತಾಲೀಮು

ಮೈಸೂರು: ನಾಡಹಬ್ಬ ದಸರಾದ ಮುಖ್ಯ ಆಕರ್ಷಣೆಯಲ್ಲೊಂದಾದ ಜಂಬೂಸವಾರಿಗೆ ಗಜಪಡೆಯನ್ನು ಸನ್ನದ್ದುಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಸಂಪ್ರದಾಯದಂತೆ ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದ್ದು ಎರಡನೇ ದಿನವಾದ ಸೋಮವಾರವೂ ಮುಂದುವರೆದಿದೆ.

ಅರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯದ ಬಳಿ ರವಿವಾರ ಸಂಜೆ 4ಕ್ಕೆ ಎಲ್ಲಾ ಆನೆಗಳಿಗೂ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಗಾದಿ ಮತ್ತು ನಮ್ದಾ ಹಾಗೂ ಮರಳಿನ ಮೂಟೆ ಇಡುವ ತೊಟ್ಟಿಲಿಗೂ ಪೂಜೆ ಸಲ್ಲಿಸಲಾಯಿತು. ನಂತರ ಬಳ್ಳೆ ಸಾಕಾನೆ ಶಿಬಿರದ ಮಹೇಂದ್ರ ಆನೆಗೆ ಗಾದಿ ಮತ್ತು ನಮ್ದಾವನ್ನು ಬಿಗಿದು ಬಳಿಕ ಅದರ ಮೇಲೆ ತೊಟ್ಟಿಲನ್ನು ಕಟ್ಟಲಾಯಿತು. ನಂತರ 50 ಕೆ.ಜಿ. ತೂಕದ 9 ಮರಳಿನ ಮೂಟೆಗಳನ್ನು ಇರಿಸಲಾಯಿತು. ಈ ಮೂಲಕ ಬಾರ ಹೊರುವ ತಾಲೀಮಿಗೆ ಚಾಲನೆ ನೀಡಲಾಯಿತು.

ಎರಡನೇ ದಿನವೂ 450 ಕೆ.ಜಿ ತೂಕದ ಭಾರ:

ಮಹೇಂದ್ರ ಆನೆಗೆ ಗಾದಿ, ನಮ್ದ, ಕಬ್ಬಿಣದ ತೊಟ್ಟಿಲು ಹಾಗೂ ಮರಳಿನ ಮೂಟೆ ಸೇರಿ ಸುಮಾರು 450 ಕೆ.ಜಿ ಭಾರವನ್ನು ಹೊರಿಸಿ ತಾಲೀಮು ಆರಂಭಿಸಲಾಯಿತು. ಈ ವೇಳೆ ಆನೆಯ ಪಕ್ಕ ಕುಮ್ಕಿ ಆನೆಯಾಗಿ ಲಕ್ಷ್ಮೀ ಮತ್ತು ಕಾವೇರಿ ಸಾಥ್ ನೀಡಿದವು.

ಸಂಜೆ 5.30ಕ್ಕೆ ಅರಮನೆಯಿಂದ ಬಲರಾಮ ದ್ವಾರದ ಮೂಲಕ ಹೊರಟು ಜಂಬೂಸವಾರಿ ಸಾಗುವ ಮಾರ್ಗವಾದ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ, ಹಳೆಯ ಆರ್.ಎಂ.ಸಿ ವೃತ್ತ, ಹೈವೇ ವೃತ್ತ ಮಾರ್ಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಪುನಃ ಅದೇ ಮಾರ್ಗವಾಗಿ ವಾಪಸ್ ಅರಮನೆಗೆ ಗಜಪಡೆ ಬಂದಿತು. ಈ ಮೂಲಕ ಮೊದಲ ದಿನದ ಭಾರ ಹೊರುವ ತಾಲೀಮು ಯಶಸ್ವಿಯಾಗಿ ನಡೆಯಿತು. ಮಹೇಂದ್ರ ಆನೆ ಯಾವುದೇ ಅಳುಕಿಲ್ಲದೇ ಲಕ್ಷ್ಮೀ ಮತ್ತು ಕಾವೇರಿ ಆನೆಗಳೊಂದಿಗೆ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಮುಂದೆ ಸಾಗಿದರೆ ಏಕಲವ್ಯ, ಗೋಪಿ, ಪ್ರಶಾಂತ, ಶ್ರೀರಾಮ ಮತ್ತು ಧನಂಜಯ ಆನೆ ಸಾಗಿದವು.

08 ಆನೆಗಳಷ್ಟೇ ಭಾಗಿ: ದಸರಾ ಗಜಪಯಣ ಮೂಲಕ ಮೊದಲ ತಂಡದಲ್ಲಿ 9 ಆನೆಗಳನ್ನು ಕರೆತಂದಿದ್ದು, ಇದರಲ್ಲಿ ಶ್ರೀಕಂಠ ಆನೆಯನ್ನು ತಾಲೀಮಿನಿಂದ ಹೊರಗಿಟ್ಟು, ಉಳಿದ ಎಲ್ಲಾ ಆನೆಗಳಿಗೂ ಭಾರ ಹೊರುವ ತಾಲೀಮು ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಡಿಸಿಎಫ್ ಐ.ಬಿ. ಪ್ರಭುಗೌಡ, ಮುಂದಿನ ದಿನಗಳಲ್ಲಿ ಧನಂಜಯ, ಪ್ರಶಾಂತ, ಏಕಲವ್ಯ ಆನೆಗಳಿಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುವುದು. ಶೀಘ್ರದಲ್ಲೇ 2ನೇ ತಂಡದ ಆನೆಗಳನ್ನು ಕರೆತರಲಾಗುತ್ತದೆ.

ಕಿಕ್ಕಿರಿದ ಜನ ಸಮೂಹ: ಗಜಪಡೆಯ ತಾಲೀಮು ವೀಕ್ಷಿಸಲು ರಾಜಮಾರ್ಗದುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ ಹಿನ್ನೆಲೆ ವಾಹನ ಸಂಚಾರಕ್ಕೆ ತೊಡಕಾಯಿತು. ಮೈಸೂರು ನಗರವಷ್ಟೇ ಅಲ್ಲದೇ ನಗರದ ಹೊರ ಭಾಗಗಳಿಂದ ಜನರು ಹೆಚ್ಚು ಆಗಮಿಸಿದ ಹಿನ್ನೆಲೆ ಕಿಕ್ಕಿರಿದ ಜನಸಂದಣಿ ಕಂಡುಬಂದಿತು. ಆನೆಗಳನ್ನು ನೋಡಿ ಅವುಗಳ ಫೋಟೋ ಮತ್ತು ವೀಡಿಯೋ ತೆಗೆಯಲು ಜನರು ಮುಗಿಬಿದ್ದರು.

ಈ ಸಂದರ್ಭ ಆರ್ ಎಫ್ಒ ಯಾಷ್ಮಾ ಪೊನ್ನಣ್ಣ, ಪಶುವೈದ್ಯ ಆದರ್ಶ ಇದ್ದರು.

Tags

Mysuru DasaraElephants
share
ವಾರ್ತಾಭಾರತಿ
ವಾರ್ತಾಭಾರತಿ
Next Story
X