Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದಸರಾ ರಂಗೋಲಿ ಸ್ಪರ್ಧೆ : ಅರಳಿದ ಅರ್ಜುನ...

ದಸರಾ ರಂಗೋಲಿ ಸ್ಪರ್ಧೆ : ಅರಳಿದ ಅರ್ಜುನ ಆನೆಯ ಕಲಾಕೃತಿ, ಕಣ್ಮನ ಸೆಳೆದ ಬಗೆ ಬಗೆಯ ರಂಗೋಲಿಗಳು

ವಾರ್ತಾಭಾರತಿವಾರ್ತಾಭಾರತಿ23 Sept 2025 5:51 PM IST
share
ದಸರಾ ರಂಗೋಲಿ ಸ್ಪರ್ಧೆ : ಅರಳಿದ ಅರ್ಜುನ ಆನೆಯ ಕಲಾಕೃತಿ, ಕಣ್ಮನ ಸೆಳೆದ ಬಗೆ ಬಗೆಯ ರಂಗೋಲಿಗಳು

ಮೈಸೂರು, ಸೆ.23 : ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಮಹಿಳಾ ದಸರಾ ಉಪ‌ ಸಮಿತಿ ವತಿಯಿಂದ ಅಂಬಾ ವಿಲಾಸ ಅರಮನೆ ಮುಂಭಾಗ ಮಂಗಳವಾರ ಬೆಳಿಗ್ಗೆ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ‌ ಮಹಿಳೆಯರು ತಮ್ಮದೇ ಆದ ವಿಭಿನ್ನ ಕಲ್ಪನೆಯಲ್ಲಿ ರಂಗೋಲಿಗಳನ್ನು ಬಿಡಿಸುವ ಮೂಲಕ ಅತ್ಯುತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ‌ ಬಹಳಷ್ಟು‌ ಮಕ್ಕಳು ಮೊಬೈಲ್ ಗೀಳಿಗೆ ಪ್ರಭಾವಿತರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುತ್ತಾರೆ. ಹಾಗಾಗಿ ಅದರ ಪರಿಕಲ್ಪನೆಯಲ್ಲಿ ಡೋಂಟ್ ಬಿ ಅಡಿಕ್ಟೆಡ್ ಎಂಬ ಶೀರ್ಷಿಕೆಯಲ್ಲಿ ನಂಜನಗೂಡು ತಾಲ್ಲೂಕಿನ ಶ್ವೇತಾ ಟಿ.ಡಿ ಅವರು ರಂಗೋಲಿ ಬಿಡಿಸಿದ್ದರೆ, ಸರಕಾರದ‌ ಗೃಹ ಜ್ಯೋತಿ ಯೋಜನೆಯಿಂದ‌ ಸಾಕಷ್ಟು ಮನೆಗಳಲ್ಲಿ ದೀಪ ಬೆಳಗಿದೆ ಎಂಬ ನಿಟ್ಟಿನಲ್ಲಿ ಮೈಸೂರಿನ ಸ್ಪಂದನ ಅವರು ಮಹಿಳೆ ಮತ್ತು ದೀಪದ ರಂಗೋಲಿಯನ್ನು ಬಿಡಿಸಿದ್ದರು.

ದಸರಾ ಅಂಗವಾಗಿ ಹುಲಿ ಮೇಲೆ ಕುಳಿತ ಚಾಮುಂಡೇಶ್ವರಿ ತಾಯಿಯನ್ನು ತುಮಕೂರಿನ ನಿರ್ಮಲಾ ಅವರು ಬಿಡಿಸಿದ್ದರು. ದುರ್ಗಾ ದೇವಿ ಮತ್ತು ದೇವಿಗೆ ಕಾವಲಾಗಿರುವ ಆನೆಯ ಚಿತ್ರವನ್ನು ಸಿಂಧೂ ಲಕ್ಷ್ಮೀ ಅವರು ಬಿಡಿಸಿದ್ದರೆ, ಹೆಣ್ಣಾಗಿ ಹುಟ್ಟಿರುವುದಕ್ಕೆ ನಾವೆಲ್ಲಾ ಹೆಮ್ಮೆ ಪಡೋಣ ಎಂಬ ಪರಿಕಲ್ಪನೆಯಲ್ಲಿ ದಾವಣಗೆರೆಯ ಲಕ್ಷ್ಮೀ ಅವರು ಚಿತ್ತಾಕರ್ಷಕವಾಗಿ ಬಿಡಿಸಿದ್ದರು. ನಂದಿ ಮತ್ತು ಶಿವಲಿಂಗವನ್ನು ವಿಜಯನಗರದ ಸುನಿತಾ ಅವರು ಬಿಡಿಸಿದ್ದರು.

ಹೀಗೆ ಚುಕ್ಕಿ ಲೆಕ್ಕಾಚಾರ ಒಂದೆಡೆಯಾದರೆ ಯಾವ ಗೆರೆಗೆ ಎಲ್ಲಿಂದ ಗೆರೆ ಹಾಕಬೇಕು, ಯಾವ ಹೂವಿಗೆ ಯಾವ ಬಣ್ಣ ತುಂಬಬೇಕು ಎಂಬ ನಾನಾ ಬಗೆಯ ಕುತೂಹಲದೊಂದಿಗೆ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು ತಾವು ಬಿಡಿಸುವ ಚಿತ್ತಾರದ ಅಂದ ಹೆಚ್ಚಿಸುವಲ್ಲಿ ಮುಳುಗಿದ್ದರು. ಅಂತೆಯೇ ಚಾಮುಂಡಿ ಬೆಟ್ಟದ ಗೋಪುರ, ಅರಸರ ಲಾಂಛನವಾದ ಗಂಡ ಬೇರುಂಡ, ನವಿಲಿನ ಚಿತ್ರ, ದಸರಾ ಆನೆ, ರಥ, ಬಾಲಕೃಷ್ಣ ಹೀಗೆ ನಾನಾ ರೀತಿಯ ರಂಗೋಲಿಗಳನ್ನು ಈ ಸ್ಪರ್ಧೆಯಲ್ಲಿ ಬಿಡಿಸಲಾಗಿತ್ತು.

ಇದಕ್ಕೂ ಮುನ್ನ ಶಾಸಕರಾದ ಟಿ.ಎಸ್.ಶ್ರೀವತ್ಸ ಅವರು ಕುರುಬಾರಹಳ್ಳಿಯ ಕಲಾವಿದ ಪುನೀತ್ ಅವರು ಅರ್ಜುನನ‌ ನೆನಪಿನಲ್ಲಿ ಮೂಡಿಸಿದ್ದ ಅರ್ಜುನ‌ ಆನೆಗೆ ಪುಷ್ಪಾರ್ಚನೆ‌ ಸಲ್ಲಿಸಿ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳಾ ದಸರಾ ಉಪ‌ ಸಮಿತಿಯಿಂದ ಆಯೋಜಿಸಲಾಗಿರುವ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 150ಕ್ಕೂ ಹೆಚ್ಚು‌ ಮಹಿಳೆಯರು ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ದಸರಾ‌ ಮಹೋತ್ಸವದ‌ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಈ ರಂಗೋಲಿ ಸ್ಪರ್ಧೆಯಿಂದ ನಾಡಹಬ್ಬ ದಸರಾಗೆ ಮತ್ತಷ್ಟು ಕಳೆಕಟ್ಟಿದೆ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಸಮಿತಿ‌ ಉಪ ವಿಶೇಷಾಧಿಕಾರಿ ಬಿ.ಎಂ.ಸವಿತ, ಕಾರ್ಯಾಧ್ಯಕ್ಷ ಬಿ.ಬಸವರಾಜು, ತೀರ್ಪುಗಾರರಾದ ಮೀನಾಕ್ಷಿ‌ ರವಿಕುಮಾರ್, ಸ್ತ್ರೀ‌ಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಪ್ರೇಮಕುಮಾರಿ, ದಸರಾ ಉಪ‌ಸಮಿತಿ ಕಾರ್ಯದರ್ಶಿಯವರಾದ ಚರಿತಾ, ಸಮಿತಿ ಸದಸ್ಯರು ಸೇರಿದಂತೆ‌ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X