Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಬರಗಾಲದ ನಡುವೆಯೂ ಜನರ ಸಂಭ್ರಮ ಸಂತೋಷ...

ಬರಗಾಲದ ನಡುವೆಯೂ ಜನರ ಸಂಭ್ರಮ ಸಂತೋಷ ತಂದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Oct 2023 9:27 PM IST
share
ಬರಗಾಲದ ನಡುವೆಯೂ ಜನರ ಸಂಭ್ರಮ ಸಂತೋಷ ತಂದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ. 23: ದಸರಾ ಎಂಬುದು ನಾಡ ಹಬ್ಬ, ಜನರ ಹಬ್ಬ. ಆದರೆ ಈ ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಮೈಸೂರು ಜಿಲ್ಲಾಡಳಿತ ಮತ್ತು ಭಾರತೀಯ ವಾಯುಪಡೆ ವತಿಯಿಂದ ನಾಡಹಬ್ಬ ದಸರಾ 2023 ವೈಮಾನಿಕ ಪ್ರದರ್ಶನ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ಏರ್ಪಡಿಸಲು ಕೇಂದ್ರ ಸಚಿವರನ್ನು ಕೋರಲಾಗಿತ್ತು. ಅದರಂತೆ ಏರ್ ಶೋವನ್ನು ಏರ್ಪಡಿಸಲಾಗಿದೆ. ಹಿಂದೆ ನಿರ್ಮಲಾ ಸೀತರಾಮನ್ ಅವರು ರಕ್ಷಣಾ ಸಚಿವರಾಗಿದ್ದಾಗ, ಇದೇ ರೀತಿ ಏರ್ ಶೋ ವನ್ನು ಏರ್ಪಡಿಸಲಾಗಿತ್ತು.

ದಸರಾ ರಜೆಯ ಸಂದರ್ಭವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ, ಏರ್ ಶೋವನ್ನು ವೀಕ್ಷಿಸುತ್ತಿದ್ದಾರೆ. ಈ ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

ದೀಪಾಲಂಕಾರದ ವ್ಯವಸ್ಥೆ ವೀಕ್ಷಣೆ

ನಾಳೆ ವಿಜಯದಶಮಿಯಂದು ಜಂಬೂ ಸವಾರಿ ಇದೆ. ಮಧ್ಯಾಹ್ನ ನಂದಿಪೂಜೆಯ ನಂತರ ಜಂಬೂಸವಾರಿ ಪ್ರಾರಂಭವಾ ಗುತ್ತದೆ. ಇಂದು ನಾನು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮೈಸೂರು ನಗರದ ಸಿಟಿರೌಂಡ್ಸ್ ಮಾಡಿ ದೀಪಾಲಂಕಾರದ ವ್ಯವಸ್ಥೆಯನ್ನು ವೀಕ್ಷಿಸಲಿದ್ದೇನೆ ಎಂದರು.

ಹಾಸ್ಟೆಲ್ ನಿರ್ಮಾಣ: ಮೈಸೂರು ಮಹಾರಾಣಿ ಕಾಲೇಜಿನ ವಿಜ್ಞಾನ , ಕಲಾ ಕಾಲೇಜು, ಹಾಸ್ಟೆಲ್ ಕಟ್ಟಡಗಳನ್ನು ಒಟ್ಟಾರೆ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಸೂಚಿಸಲಾಗಿದ್ದು, ಇದರಿಂದ ಸುಮಾರು 2000 ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗಿದೆ. ಹಿಂದಿನ ಸರ್ಕಾರದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದರು.

ಬರಗಾಲದ ಕಾಮಗಾರಿಗಳು ಸಾಗುತ್ತಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ವಿದ್ಯುತ್ ಬೇಡಿಕೆ ಹೆಚ್ಚಳ: ಈ ಬಾರಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ 10 ರಿಂದ 15 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿತ್ತು. ಆದರೆ ಈ ಬಾರಿ ಬೇಡಿಕೆ 15 ರಿಂದ 16 ಸಾವಿರ ಮೆಗಾವ್ಯಾಟ್ ಗೆ ಏರಿಕೆಯಾಗಿದೆ. 32000 ಮೆ.ವಾ ಉತ್ಪಾದಿಸುವ ಸಾಮರ್ಥ್ಯವಿದ್ದರೂ ಕೂಡ ಆ ಪ್ರಮಾಣದ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಟೀಕಿಸುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಆರೋಪ ಮಾಡುವುದು ಬಿಟ್ಟರೆ ಬೇರೆ ಏನೂ ತಿಳಿದಿಲ್ಲ ಎಂದರು.

ಸುಳ್ಳು ಆರೋಪಗಳು‌..!

ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ. ಈ ಎಲ್ಲ ವಿಷಯಗಳು ಕೇವಲ ಆರೋಪ ಮಾಡುವ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿರಬೇಕು. ಅವರು ಮಾಡುವ ಆರೋಪಗಳೆಲ್ಲವೂ ಸುಳ್ಳು ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X