Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕಂದಾಯ ಇಲಾಖೆಯ ಸಮಸ್ಯೆ ಇತ್ಯರ್ಥಕ್ಕೆ...

ಕಂದಾಯ ಇಲಾಖೆಯ ಸಮಸ್ಯೆ ಇತ್ಯರ್ಥಕ್ಕೆ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ: ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ17 Jan 2024 5:13 PM IST
share
ಕಂದಾಯ ಇಲಾಖೆಯ ಸಮಸ್ಯೆ ಇತ್ಯರ್ಥಕ್ಕೆ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ: ಸಚಿವ ಕೃಷ್ಣ ಭೈರೇಗೌಡ

ಮೈಸೂರು: ಕಂದಾಯ ಇಲಾಖೆಯ ದಾಖಲೆಗಳ ಡಿಜಿಟಲೀಕರಣ ಅಭಿಯಾನ ಆರಂಭಿಸಲಾಗಿದ್ದು, ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ನಗರದ ಕಾಂಗ್ರೆಸ್‌‍ ಭವನದ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ಕಳವು, ದಾಖಲೆಳನ್ನು ತಿದ್ದುವುದು, ಮೂಲ ದಾಖಲಾತಿ ಇಲ್ಲದಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ಇತ್ಯರ್ಥಕ್ಕೆ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದರು.

ದಾಖಲೆಗಳ ಡಿಜಿಟಲೀಕರಣದಿಂದ ನಾಗರಿಕರ ವಸೂಲಿ, ಶೋಷಣೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ರೆಕಾರ್ಡ್‌ ರೂಂ ಸಂಪರ್ಕಿಸದೇ ಆನ್‌ಲೈನ್‌ ಮೂಲಕವೇ ದಾಖಲೆಗಳನ್ನು ಪಡೆಯಬಹುದಾಗಿದೆ ಎಂದು ವಿವರಿಸಿದರು.

ಕಂದಾಯ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಶೇ. 70 ಪ್ರಕರಣಗಳು ಇತ್ಯರ್ಥಪಡಿಸಬಹುದು. ಉಳಿಕೆ ಶೇ. 30 ಪಕ್ರರಣಗಳ ಇತ್ಯರ್ಥ ಜಟಿಲವಾಗಿರುವುದು ಗಮನಕ್ಕೆ ಬಂದಿದೆ. ಅದರಲ್ಲಿ ದಾಖಲೆಗಳು ಇಲ್ಲದಿರುವುದು ಸೇರಿದೆ ಎಂದರು.

ಪೌತಿ ಖಾತೆ ಆಂದೋಲನ:

ರಾಜ್ಯದ ಲಕ್ಷಾಂತರ ಖಾತೆಗಳು ಅಜ್ಜನ, ತಂದೆಯ ಹೆಸರಿನಲ್ಲಿ ಉಳಿದಿವೆ. ಕುಟುಂಬದ ಸದಸ್ಯರು ಒಪ್ಪಿದರೆ ಸ್ಥಳದಲ್ಲಿಯೇ ಖಾತೆ ಮಾಡಿಕೊಡುತ್ತೇವೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪೌತಿ ಖಾತೆ ಆಂದೋಲನವನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ರಾಜ್ಯಕ್ಕೆ ವಿಸ್ತರಣೆ ಮಾಡುತ್ತೇವೆ ಎಂದರು.

550 ಕೋಟಿ ರೈತರ ಖಾತೆಗೆ:

ರೈತರ ಖಾತೆಗೆ ಬರ ಪರಿಹಾರದ ಹಣವನ್ನು ಜಮೆ ಮಾಡಲಾಗುತ್ತಿದೆ. ಈವರೆಗೆ ಸುಮಾರು 550 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ. ಒಂದು ವಾರದೊಳಗೆ ಮೊದಲ ಕಂತಿನ ಹಣ ರೈತರಿಗೆ ತಲುಪಲಿದೆ ಎಂದು ತಿಳಿಸಿದರು.

ಬೆಳೆ ಪರಿಹಾರಕ್ಕೆ ಸಂಬಂಧಪಟ್ಟಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಕ್ಟೋಬರ್‌ ತಿಂಗಳಲ್ಲಿ ಕೇಂದ್ರ ತಂಡ ಪರಿಶೀಲನೆ ನಡೆಸಿತು. ರಾಜ್ಯದ ಮನವಿ ಬಗ್ಗೆ ಕೇಂದ್ರ ಈವರೆಗೂ ಯಾವುದೇ ತೀರ್ಮಾನ ಮಾಡಿಲ್ಲ. ಡಿ.23ರಂದು ಕರೆದಿದ್ದ ಸಭೆಯೂ ರದ್ದಾಗಿದೆ. ಮಂಗಳವಾರದ ಸಭೆಯೂ ನಡೆದಿಲ್ಲ ಎಂದು ಬರ ಪರಿಹಾರ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಪ್ರಕರಣ ಇತ್ಯರ್ಥಕ್ಕೆ ಗುಡುವು:

ತಹಸಿಲ್ದಾರ್‌ ಕೋರ್ಟ್‌ ವ್ಯಾಜ್ಯಗಳನ್ನು ಅರೆ ನ್ಯಾಯಿಕ ಪ್ರಕರಣಗಳೆಂದು ಕರೆಯಲಾಗುತ್ತಿದೆ. ಸೀಮಿತ ಅವಧಿಯಲ್ಲಿ ಮುಗಿಸುವಂತೆ ಹೇಳಲಾಗುವುದಿಲ್ಲ. ಆದರೆ, ರಾಜ್ಯದ ಎಲ್ಲ ತಹಸಿಲ್ದಾರ್‌ಗಳಿಗೆ ಜನವರಿ ಅಂತ್ಯದೊಳಗೆ 90 ದಿನಗಳನ್ನು ಮೀರಿದ ಯಾವುದೇ ಪ್ರಕರಣಗಳು ಇರಬಾರದೆಂದು ಗುರಿ ಕೊಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ತಹಸಿಲ್ದಾರ್‌, ಉಪ ಆಯುಕ್ತರು, ಜಿಲ್ಲಾಧಿಕಾರಿಗಳ ಕೋರ್ಟ್‌ನಲ್ಲಿ ಒಂದು ವರ್ಷ ಮೀರಿದ ಪ್ರಕರಣಗಳಿದ್ದವು. 4 ತಿಂಗಳಲ್ಲಿ 33 ಸಾವಿರ ಪ್ರಕರಣಗಳನ್ನು ಇತ್ಯಥಪಡಿಸಲಾಗಿದೆ. ತಹಸಿಲ್ದಾರ್‌ ಕೋರ್ಟ್‌ನಲ್ಲಿ 2215 ಪ್ರಕರಣಗಳಿವೆ. ಉಳಿಕೆ 27 ಸಾವಿರ ಪ್ರಕರಣಗಳ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X