Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ...

ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಅರಮನೆ ಫಲಪುಷ್ಪ ಪ್ರದರ್ಶನದಲ್ಲಿ ನೋಡುಗರ ಮನ ಸೆಳೆಯುತ್ತಿರುವ ವಿವಿಧ ಆಕೃತಿಗಳು

ವಾರ್ತಾಭಾರತಿವಾರ್ತಾಭಾರತಿ21 Dec 2024 11:13 PM IST
share
ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ ಪಂದ್ಯಾವಳಿಗೆ

ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಚಾಲನೆ ನೀಡಿದರು.

ಸಾವಿರಾರು ಫಲಪುಷ್ಪಗಳಿಂದ ವಿವಿಧ ರೀತಿಯ ಕಲಾಕೃತಿಗಳ ನಿರ್ಮಾಣ :

ಫಲಪುಷ್ಪ ಪ್ರದರ್ಶನಕ್ಕೆ 25 ಸಾವಿರ ಹೂವಿನ ಕುಂಡಗಳನ್ನು ಇಡಲಾಗಿದ್ದು, ಗುಲಾಬಿ, ಸೇವಂತಿಗೆ, ಜಲಿಯ ಸಾಲ್ವಿಯ, ಚೆಂಡು ಹೂ, ಸೂರ್ಯಕಾಂತಿ ಹೂವುಗಳು ಸೇರಿದಂತೆ ಹಲವು ಬಗೆಯ ಹೂವುಗಳನ್ನು ಇಲ್ಲಿ ಕಾಣಬಹುದಾಗಿದೆ. ಅರಮನೆ, ರಾಜ್ಯ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಕಲಾಕೃತಿ, ಚಾಮುಂಡಿಬೆಟ್ಟದ ನಂದಿ ವಿಗ್ರಹ, ಪಕ್ಷಿಗಳು, ದೆಹಲಿಯ ಅಕ್ಷರಧಾಮ, ಕಾರ್ಗಿಲ್ ವಿಜಯಸ್ತಂಭ, ದಕ್ಷಿಣ ಕಾಶಿಯ ನಂಜುಂಡೇಶ್ವರ, ಗಂಡಭೇರುಂಡ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಕೃತಿ ಸೇರಿದಂತೆ ಹಲವು ವಿಭಿನ್ನ ಚಿತ್ತಾರಗಳನ್ನು ಹೂವುಗಳಲ್ಲಿ ಅರಳಿಸಲಾಗಿದೆ.

ಬೊಂಬೆ ಮನೆ, ಛಾಯಾಚಿತ್ರಗಳ ಪ್ರದರ್ಶನ ಹಾಗೂ ಕುಸ್ತಿ ಪಂದ್ಯಾವಳಿ ಆಯೋಜನೆ :

ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಲ್ಲಿ ಮೈಸೂರು ಅರಮನೆ ಮತ್ತು ರಾಜ ಮನೆತನಗಳ ಇತಿಹಾಸ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಬೊಂಬೆಗಳ ಪ್ರದರ್ಶನ ಹಾಗೂ ಅರಮನೆಯ ವರಾಹ ಉದ್ಯೋನವನದಲ್ಲಿ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಬಂದಂತಹ ವೀಕ್ಷಕರ ಗಮನ ಸೆಳೆದವು.

ರಸಸಂಜೆ ಕಾರ್ಯಕ್ರಮಕ್ಕೆ ಮನಸೋತ ವೀಕ್ಷಕರು ಖ್ಯಾತ ಹಿನ್ನಲೆಗಾಯಕರಾದ ಶ್ರೀ ಮಧುಬಾಲಕೃಷ್ಣನ್ ಮತ್ತು ತಂಡದವರಿoದ ಆಯೋಜಿಸಲಾಗಿದ್ದ "ಸಂಗೀತ ರಸಸಂಜೆ" ಕಾರ್ಯಕ್ರಮವು ನೆರೆದಿದ್ದಂತಹ ಸಾವಿರಾರು ವೀಕ್ಷಕರನ್ನು ತನ್ನತ್ತ ಸೆಳೆದು ಮಧುರ ಸಂಗೀತಕ್ಕೆ ಮನಸೋಲುವಂತೆ ಮಾಡಿತು.

ಫಲಪುಷ್ಪ ಪ್ರದರ್ಶನ ಹಾಗೂ ಅರಮನೆ ಡಿಪಾಲಂಕಾರವು ಡಿಸೆಂಬರ್ 21 ರಿಂದ 31 ರವರೆಗೆ ನಡೆಯಲಿದೆ. ಆಗಮಿಸುವ ವೀಕ್ಷಕರಿಗೆ ಪ್ರವೇಶ ದರವನ್ನು ನಿಗಧಿ ಪಡಿಸಿದ್ದು, ವಯಸ್ಕರಿಗೆ ಮತ್ತು ವಿದೇಶಿ ಪ್ರವಾಸಿಗರಿಗೆ ರೂ.30, 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ.20 ಗಳು ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಫಲಪುಷ್ಪ ಪ್ರದರ್ಶನವು ಪ್ರತಿದಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ಅರಮನೆ ವಿದ್ಯುತ್ ದೀಪಾಲಂಕಾರವು ಸಂಜೆ 7 ರಿಂದ 9 ರವರೆಗೆ ಇರಲಿದೆ.

ಈ ಸಂದರ್ಭದಲ್ಲಿ 2025 ನೇ ಸಾಲಿನ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ ವಹಿಸಿದ್ದರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ. ಎನ್. ಮಂಜೇಗೌಡ, ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಎಂ. ಗಾಯತ್ರಿ, ಅಪರ ಜಿಲ್ಲಾಧಿಕಾರಗಳಾದ ಡಾ. ಪಿ. ಶಿವರಾಜು ಹಾಗೂ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ. ಎಸ್. ಸುಬ್ರಮಣ್ಯ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜು ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X