Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ...

ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕೊಟ್ಟಿದ್ದು ಡಾ.ಬಿ.ಆರ್.ಅಂಬೇಡ್ಕರ್: ಸಚಿವ ಎಚ್.ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ26 Jan 2024 4:41 PM IST
share
ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕೊಟ್ಟಿದ್ದು ಡಾ.ಬಿ.ಆರ್.ಅಂಬೇಡ್ಕರ್: ಸಚಿವ ಎಚ್.ಸಿ ಮಹದೇವಪ್ಪ

ಮೈಸೂರು: 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ ಮಾತನಾಡಿದರು.

ನೂರಾರು ವರ್ಷಗಳ ಸತತ ಹಾಗೂ ಸುದೀರ್ಘ ಹೋರಾಟದ ಮೂಲಕ 1947 ರ ಆಗಸ್ಟ್ 15 ರಂದು ದಾಸ್ಯದ ಸರಪಳಿ ಕಳಚಿ ಸ್ವಾತಂತ್ರ‍್ಯ ಪಡೆದುಕೊಂಡೆವು. ಅದರಂತೆ ನಮ್ಮದೇ ಆದ ಸಂವಿಧಾನ ಹೊಂದುವ ಕನಸು ನನಸಾದುದು ೧1950 ಜನವರಿ 26 ರಂದು. ಅಂದು ನಾವೇ ರಚಿಸಿಕೊಂಡ ಸಂವಿಧಾನದ ಬೆಳಕಿನಲ್ಲಿ ನಮ್ಮನ್ನು ನಾವೇ ಆಳಿಕೊಳ್ಳುತ್ತಿದ್ದೇವೆ ಎಂದರು.

ಇಂದು ನಾವು ಸರ್ವತಂತ್ರ ಸ್ವತಂತ್ರರೆಂದು ಘೋಷಿಸಿಕೊಂಡ ಸುದಿನ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿ ಹಿಡಿಯುತ್ತೇವೆ. ನಮ್ಮದೇ ದೇಶ, ನಮ್ಮದೇ ಸಂವಿಧಾನ, ನಮ್ಮದೇ ಆಡಳಿತ ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರು ಕೈಗೊಂಡ ಪವಿತ್ರ ದಿನ ಎಂದರು.

ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕಟ್ಟಿಕೊಟ್ಟದ್ದು ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಹಿರಿಯರ ತಂಡ. ಅವರ ಅವಿರತ ಪ್ರಯತ್ನದ ಫಲವಾಗಿ ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂವಿಧಾನ ರೂಪಗೊಂಡಿದೆ. ನಮ್ಮ ಗಣರಾಜ್ಯದ ಇಂದಿನ ಅಸ್ತಿತ್ವಕ್ಕೆ ನಮ್ಮ ಸಂವಿಧಾನವೇ ತಳಹದಿ. ದೇಶಪ್ರೇಮ ಮತ್ತು ಅದ್ಭುತ ಅನುಭವೀ ಪಾಂಡಿತ್ಯದಿಂದಾಗಿ ನಮಗೆ ಈ ಸಂವಿಧಾನ ದೊರೆತಿದೆ. ವಿಶ್ವದಲ್ಲಿಯೇ ಅತ್ಯಂತ ಸುದೀರ್ಘವಾದ, ಅತ್ಯಂತ ಸುಸಂಬದ್ಧವಾದ ಲಿಖಿತ ಸಂವಿಧಾನ ನಮ್ಮದು ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಹೇಳಿದಂತೆ ನ್ಯಾಯವೆಂದರೆ ಸ್ವಾತಂತ್ರ‍್ಯ ಸಮಾನತೆ ಮತ್ತು ಸೌಹಾರ್ದ. ಅವರ ಈ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಧ್ಯೇಯ ನಮ್ಮದು. ಪ್ರಜಾಪ್ರಭುತ್ವ ವ್ಯವಸ್ಥೆಯ ಬೇರುಗಳು ದೃಢವಾಗುವುದು ಇದರಿಂದಲೇ ಎಂಬ ನಂಬಿಕೆ ನಮ್ಮದು. ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು-ಮನ-ಧನಗಳಿಂದ ತ್ಯಾಗಗೈದ, ಬಲಿದಾನ ನೀಡಿದ ನಾಯಕರನ್ನು, ಅಸಂಖ್ಯಾತ ಯೋಧರನ್ನು ಹಾಗೂ ದೇಶಾಭಿಮಾನಿಗಳನ್ನು ನೆನೆಯುವುದು ಮತ್ತು ಅವರು ಆಶಿಸಿದಂತೆ, ರಾಷ್ಟ್ರವನ್ನು ಅಭ್ಯುದಯದ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜೋತಿ, ಶಕ್ತಿ, ವಿದ್ಯಾನಿಧಿ ಯೋಜನೆಗಳ ಮೂಲಕ ರಾಜ್ಯದ ಕೋಟ್ಯಾಂತರ ಜನರಿಗೆ ಪ್ರಯೋಜನಗಳನ್ನು ಒದಗಿಸಿದೆ. ಇದರಿಂದ ಸರ್ಕಾರ ಬಡವರು ದಲಿತರು ಹಿಂದುಳಿದವರು ಹಾಗೂ ಮಹಿಳೆಯರ ಪರವಾಗಿ ನಿಂತಿದೆ ಎಂಬುದು ಸಾಬೀತಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪ್ರಾದೇಶಿಕ ಆಯುಕ್ತರಾದ ಬಿ ಜಿ ಪ್ರಕಾಶ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X