Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರಲ್ಲಿ ಅ.17 ರಂದು ಬೃಹತ್ ಉದ್ಯೋಗ...

ಮೈಸೂರಲ್ಲಿ ಅ.17 ರಂದು ಬೃಹತ್ ಉದ್ಯೋಗ ಮೇಳ; 221 ಕಂಪನಿಗಳ ನೋಂದಣಿ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 Oct 2025 8:03 PM IST
share
ಮೈಸೂರಲ್ಲಿ ಅ.17 ರಂದು ಬೃಹತ್ ಉದ್ಯೋಗ ಮೇಳ; 221 ಕಂಪನಿಗಳ ನೋಂದಣಿ : ಡಾ.ಶರಣಪ್ರಕಾಶ್ ಪಾಟೀಲ್

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಆರ್‌ ಪಾಟೀಲ್ ಅವರು ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜ್ಯಾದ್ಯಾಂತ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು https://udyogamela.ksdckarnataka.com ಗೆ ಹೆಸರು ನೋಂದಾಯಿಸಿಕೊಳ್ಳಬಹುದು‌. ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು

45000 ಉದ್ಯೋಗ ಖಾಲಿ:

ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದು, ಸ್ಥಳೀಯ ಕಂಪನಿಗಳು ಸಹ ಹೆಸರು ನೋಂದಾಯಿಸಿಕೊಳ್ಳಲಿದೆ. ಉದ್ಯೋಗದಾತರು ಸುಮಾರು 45000 ಉದ್ಯೋಗ ಖಾಲಿ ಇರುವುದಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಕೌಶಲ್ಯಗಳ ಮೇಲೆ ಕಂಪನಿಗಳು ಆಯ್ಕೆ ಮಾಡಿಕೊಳ್ಳಲಿದೆ ಎಂದು ವಿವರಿಸಿದರು.

ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಅವರು ಸಹ ಉದ್ಯೋಗ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು‌.

ಯುವ ನಿಧಿ ಪ್ಲಸ್‌ ಯೋಜನೆಯಡಿ ತರಬೇತಿ :

ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಬಹಳಷ್ಟು ಮಂದಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಹೆಸರು ನೋಂದಾಯಿಸಿಕೊಂಡರೆ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಭತ್ಯೆ ನಿಂತುಹೋಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಯುವನಿಧಿ ಯೋಜನೆಯಡಿ ತಿಳಿಸಿರುವಂತೆ 2 ವರ್ಷ ಅಥವಾ ಕೆಲಸ ಸಿಗುವವರೆಗೆ ಯಾವುದು ಮೊದಲು ಅಲ್ಲಿಯವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಯುವನಿಧಿ ಪ್ಲಸ್ ಯೋಜನೆಯಡಿ ನೀಡಲಾಗುವ ಕೌಶಲ್ಯ ತರಬೇತಿಗೆ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಿ ಎಂದರು.

ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿರುತ್ತದೆ‌. ಉದ್ಯೋಗ ಮೇಳದಲ್ಲಿ ಕನಿಷ್ಠ ಹಾಗೂ ಗರಿಷ್ಠ ವಿದ್ಯಾರ್ಹತೆ ಹೊಂದಿರುವವರಿಗೂ ಉದ್ಯೋಗಾವಕಾಶವಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತ ನಾಯಕ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಜಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಎನ್ ನಾಗರಾಜ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Dr. Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X