ನನ್ನ ತಂದೆ ಡಾ.ಎಚ್.ಸಿ.ಮಹದೇವಪ್ಪ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ: ಸಂಸದ ಸುನೀಲ್ ಬೋಸ್

ಸುನೀಲ್ ಬೋಸ್
ಮೈಸೂರು: ನನ್ನ ತಂದೆ ಡಾ.ಎಚ್.ಸಿ.ಮಹದೇವಪ್ಪ ಅವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ನಡುವೆ ಉಂಟಾಗಿದೆ ಎನ್ನಲಾದ ಮುನಿಸಿನ ವಿಚಾರವಾಗಿ ಶನಿವಾರ ಮಾತನಾಡಿದ ಅವರು, ಮಹದೇವಪ್ಪ ಅವರು ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ನಿಂದಲೇ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಮಹದೇವಪ್ಪ ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಪಕ್ಷದಿಂದ ಅವರು ಎರಡು ಬಾರಿ ಸಚಿವರಾಗಿದ್ದಾರೆ ಎಂದರು.
2028ರ ಚುನಾವಣೆಯಲ್ಲಿ ನಂಜನಗೂಡಿನಿಂದ ಸ್ಪರ್ಧಿಸಲಿದ್ದಾರೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದೊಂದಿಗೆ ಕೈಜೋಡಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇವೆಲ್ಲವೂ ಸುಳ್ಳು ಸುದ್ದಿಗಳಾಗಿವೆ. ಸದ್ಯಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸುವ ಯಾವುದೇ ಲಕ್ಷಣಗಳಿಲ್ಲ ಎಂದು ಸುನೀಲ್ ಬೋಸ್ ಸ್ಪಷ್ಟಪಡಿಸಿದರು.
Next Story




