Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಇಂಜಿನಿಯರ್ ಎಂದರೆ ಕಟ್ಟಡ ಕಟ್ಟುವವರಲ್ಲ,...

ಇಂಜಿನಿಯರ್ ಎಂದರೆ ಕಟ್ಟಡ ಕಟ್ಟುವವರಲ್ಲ, ಭವಿಷ್ಯ ರೂಪಿಸುವವರು: ಸಚಿವ ಎನ್. ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Oct 2026 2:51 PM IST
share
ಇಂಜಿನಿಯರ್ ಎಂದರೆ ಕಟ್ಟಡ ಕಟ್ಟುವವರಲ್ಲ, ಭವಿಷ್ಯ ರೂಪಿಸುವವರು: ಸಚಿವ ಎನ್. ಚಲುವರಾಯಸ್ವಾಮಿ

ಮೈಸೂರು, ಅ.3: ಇಂಜಿನಿಯರ್ ಎಂದರೆ ಕೇವಲ ಕಟ್ಟಡ ಕಟ್ಟುವ ವ್ಯಕ್ತಿಯಲ್ಲ; ಇಂಜಿನಿಯರ್ ಎಂದರೆ ದೇಶದ ಭವಿಷ್ಯ ಕಟ್ಟುವ ಶಿಲ್ಪಿ. ಹೀಗಾಗಿ ಸುಭದ್ರ ಭವಿಷ್ಯ ನಿರ್ಮಾಣದಲ್ಲಿ ಇಂಜಿನಿಯರ್‌ಗಳ ಸಮರ್ಪಣಾ ಮನೋಭಾವ ಅತ್ಯಂತ ಮಹತ್ವದ್ದು ಎಂದು ಜಲ ಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ವತಿಯಿಂದ ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಸರ್ ಎಂ.ವಿ. ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 41ನೇ ‘ನ್ಯಾಷನಲ್ ಕನ್ವೆನ್ಷನ್ ಆಫ್ ಸಿವಿಲ್ ಇಂಜಿನಿಯರಿಂಗ್’ ( ರಾಷ್ಟ್ರೀಯ ಸಮಾವೇಶ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜ್ಞಾನವನ್ನು ಗಳಿಸುವುದು ಎಷ್ಟು ಮುಖ್ಯವೋ, ಅದನ್ನು ಸಮಾಜದ ಹಿತಕ್ಕಾಗಿ ಸದ್ಬಳಕೆ ಮಾಡಿಕೊಳ್ಳುವುದು ಅಷ್ಟೇ ಪ್ರಮುಖ. ನಾವು ನಿತ್ಯವೂ ಸಂಚರಿಸುವ ರಸ್ತೆ, ಸೇತುವೆ, ಮನೆ ಬಾಗಿಲಿಗೆ ಬರುವ ನೀರು, ವಿದ್ಯುತ್ ಹಾಗೂ ಅಂಗೈಯಲ್ಲಿರುವ ಮೊಬೈಲ್ ಇವೆಲ್ಲವೂ ನಿತ್ಯಜೀವನದ ಸಹಜ ಭಾಗವೆನಿಸಬಹುದು. ಆದರೆ, ಈ ಪ್ರತಿಯೊಂದು ಸೌಲಭ್ಯದ ಹಿಂದೆಯೂ ಸಾವಿರಾರು ಇಂಜಿನಿಯರ್‌ಗಳ ಜ್ಞಾನ, ಕಠಿಣ ಪರಿಶ್ರಮ, ಯೋಜನೆ ಹಾಗೂ ಹೊಣೆಗಾರಿಕೆ ಅಡಗಿದೆ ಎಂದರು.

ಜಗತ್ತು ಇಂದು ತೀವ್ರ ಗತಿಯಲ್ಲಿ ಬದಲಾಗುತ್ತಿದ್ದು, ಕೃತಕ ಬುದ್ಧಿಮತ್ತೆ (ಎಐ), ರೊಬೊಟಿಕ್ಸ್, ಸೆಮಿಕಂಡಕ್ಟರ್, ಹಸಿರು ಇಂಧನ, ಎಲೆಕ್ಟ್ರಿಕ್ ವಾಹನಗಳು ಹಾಗೂ ಬಾಹ್ಯಾಕಾಶ ತಂತ್ರಜ್ಞಾನಗಳು ನಮ್ಮ ಬದುಕಿನ ದಿಕ್ಕನ್ನೇ ಬದಲಿಸುತ್ತಿವೆ. ಈ ನೂತನ ತಾಂತ್ರಿಕ ಯುಗದಲ್ಲಿ ಕರ್ನಾಟಕದ ಪಾತ್ರ ಅಗ್ರಗಣ್ಯವಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮಗಳಲ್ಲಿ ಅಪಾರ ಪ್ರತಿಭೆ, ಹೊಸ ಆಲೋಚನೆ ಹಾಗೂ ಕನಸುಗಳಿವೆ. ಅವುಗಳಿಗೆ ಆಧುನಿಕ ತಂತ್ರಜ್ಞಾನದ ಬಲ ತುಂಬುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರತಿಪಾದಿಸಿದರು.

ಅಭಿವೃದ್ಧಿ ಎಂದರೆ ಕೇವಲ ಬೃಹತ್ ಯೋಜನೆಗಳಷ್ಟೇ ಅಲ್ಲ; ರೈತನ ಜಮೀನಿಗೆ ಸಕಾಲದಲ್ಲಿ ನೀರು ಒದಗಿಸುವುದು, ವಿದ್ಯಾರ್ಥಿಗೆ ಗುಣಮಟ್ಟದ ಡಿಜಿಟಲ್ ಶಿಕ್ಷಣ ನೀಡುವುದು, ಗ್ರಾಮಕ್ಕೆ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವುದು ಹಾಗೂ ಯುವಜನತೆಗೆ ಕೌಶಲ ಆಧಾರಿತ ಉದ್ಯೋಗಾವಕಾಶ ಕಲ್ಪಿಸುವುದೇ ನೈಜ ಪ್ರಗತಿ. ಇಂತಹ ಪ್ರತಿಯೊಂದು ಜನಪರ ಅಭಿವೃದ್ಧಿಯ ಹೆಜ್ಜೆಯಲ್ಲೂ ಇಂಜಿನಿಯರ್‌ಗಳ ಕೊಡುಗೆ ಅನನ್ಯವಾಗಿದೆ ಎಂದರು.

ನಮ್ಮ ತಂತ್ರಜ್ಞಾನವು ಕೇವಲ ‘ಸ್ಮಾರ್ಟ್’ ಆಗಿರದೆ ‘ಸುಸ್ಥಿರ’ವಾಗಿರಬೇಕು. ಯುವಜನರು ಕೇವಲ ಉದ್ಯೋಗ ಅರಸದೆ ಉದ್ಯೋಗ ಸೃಷ್ಟಿಕರ್ತರಾಗಬೇಕು, ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕಿಂತ ಪರಿಹಾರ ಕಂಡುಕೊಳ್ಳುವತ್ತ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆ ಸದಾ ಅನುಕರಣೀಯ. ತಂತ್ರಜ್ಞಾನವೇ ಇಲ್ಲದ ಆ ಕಾಲದಲ್ಲೇ ಅವರು ನಿರ್ಮಿಸಿದ ಅದ್ಭುತ ಯೋಜನೆಗಳನ್ನು ಇಂದಿಗೂ ಯಾರೂ ಮೀರಿಸಲು ಸಾಧ್ಯವಾಗಿಲ್ಲ. ಪ್ರಸ್ತುತ ಲಭ್ಯವಿರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇನ್ನಷ್ಟು ಕ್ರಾಂತಿಕಾರಿ ಕಾರ್ಯಗಳು ಸಾಕಾರಗೊಳ್ಳಬೇಕಿದೆ. ಜ್ಞಾನ, ತಂತ್ರಜ್ಞಾನ ಮತ್ತು ನವೀನತೆಯ ಮೂಲಕ ಜನಸೇವೆ ಮಾಡುತ್ತಾ ಬಲಿಷ್ಠ, ಆಧುನಿಕ ಹಾಗೂ ಸುಸ್ಥಿರ ಕರ್ನಾಟಕವನ್ನು ಒಟ್ಟಾಗಿ ಕಟ್ಟೋಣ ಎಂದ ಅವರು, ನಾಡಿನ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಸ್ತ ಇಂಜಿನಿಯರ್‌ಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವೇಳೆ ದೇಶಕ್ಕೆ ಕೊಡುಗೆ ನೀಡಿದ ಹಿರಿಯ ಇಂಜಿನಿಯರ್ ಗಳಿಗೆ ಸಚಿವರು ಸನ್ಮಾನಿಸಿ, ಅಭಿನಂದಿಸಿದರು. ಜೊತೆಗೆ, ಇಂಜಿನಿಯರ್ ಮನೀಶ್ ಪಾಂಡೆ ಅವರಿಗೆ "ಯಂಗ್ ಇಂಜಿನಿಯರ್" ಅವಾರ್ಡ್ ನೀಡಿ ಸನ್ಮಾನಿಸಿದರು.

ವೇದಿಕೆ ಕಾರ್ಯಕ್ರಮದ ಬಳಿಕ "ಸುಸ್ಥಿತ ಭಾರತ ನಿರ್ಮಾಣಕ್ಕೆ ಸಿವಿಲ್ ಇಂಜಿನಿಯರ್ ಗಳ ಕೊಡುಗೆ - 2047" ರ ವಿಷಯ ಕುರಿತು ಎಂಜಿನಿಯರ್ ಗಳೊಂದಿಗೆ ಸಚಿವರು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಸಿವಿಡಿಬಿ ಚೇರ್ಮೆನ್ ಪಿ. ಸೂರ್ಯಪ್ರಕಾಶ್, ಸಂಸ್ಥೆಯ ಪದಾಧಿಕಾರಿಗಳಾದ ಸೀತಾರಾಮ್, ನಾಗರಾಜ್, ಎಚ್. ಎಸ್. ಸುರೇಶ್ ಬಾಬು, ನಂಜಯ್ಯ, ನಿವೃತ್ತ ಮುಖ್ಯ ಇಂಜಿನಿಯರ್ ಮಹದೇವ್ , ಆಖಿಲ ಭಾರತ ಇಂಜಿನಿಯರ್ ಸಂಸ್ಥೆಯ ಮಾಜಿ ಅಧ್ಯಕ್ಷ ವಿ.ಬಿ.ಸಿಂಗ್, ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X